Ad imageAd image

ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ : ಸಿದ್ದರಾಮಯ್ಯ 

Bharath Vaibhav
ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ : ಸಿದ್ದರಾಮಯ್ಯ 
siddaramaiah
WhatsApp Group Join Now
Telegram Group Join Now

ಮೈಸೂರು: ಪ್ರತಿಪಕ್ಷಗಳು ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.ನೇಹಾ ಕೊಲೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದ ಮುಖ್ಯಮಂತ್ರಿಗಳು, ಕೊಲೆಗಾರರನ್ನು ಕೂಡಲೇ ಬಂಧಿಸಲಾಗಿದೆ.

ಇದು ಲವ್ ಜಿಹಾದ್ ಪ್ರಕರಣವಲ್ಲ. ಸರ್ಕಾರ ತನಿಖೆಯನ್ನು ಗಂಭೀರವಾಗಿ ಕೈಗೊಂಡಿದ್ದು. ಕೊಲೆಗಾರನಿಗೆ ಉಗ್ರ ಶಿಕ್ಷೆ ನೀಡಲು ಪ್ರಯತ್ನ ಮಾಡಲಾಗುವುದು ಎಂದರು.

ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ

ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬ ಬಗ್ಗೆ ಮಾತನಾಡಿ ಎಲ್ಲಾ ಕಾಲದಲ್ಲಿಯೂ ಕೊಲೆಗಳಾಗಿವೆ. ಹಾಗೆಂದು ಕಾನೂನು ಸುವ್ಯವಸ್ಥೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದಲ್ಲ. ಕರ್ನಾಟಕದಲ್ಲಿ ಇರುವಷ್ಟು ಶಾಂತಿ ಸುವ್ಯವಸ್ಥೆ ಬೇರೆ ರಾಜ್ಯಗಳಲ್ಲಿಲ್ಲ.

ನಾವು ಯಾವುದೇ ಕೃತ್ಯ ನಡೆದರೂ, ಅದನ್ನು ತೀವ್ರವಾಗಿ ಖಂಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ. ಖಂಡನೀಯ ಎಂದರು. ರಾಜ್ಯಾದ್ಯಂತ ಪ್ರತಿಭಟನೆಗಳಾಗುತ್ತಿರುವ ಬಗ್ಗೆ ಮಾತನಾಡಿ ಇದರ ಪರಿಣಾಮ ಸರ್ಕಾರದ ಮೇಲೆ ಆಗುವುದಿಲ್ಲ ಎಂದರು.

ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ

ರಾಜ್ಯದಲ್ಲಿ ಚುನಾವಣಾ ವಾತಾವರಣ ಉತ್ತಮವಾಗಿದ್ದು ದೇಶದಲ್ಲಿ ಅಥವಾ ಕರ್ನಾಟಕದಲ್ಲಿ ಮೋದಿ ಅಲೆ ಇಲ್ಲ. ಬಿಜೆಪಿ ಅಭ್ಯರ್ಥಿಗಳು ಮೋದಿ ಹೆಸರಿನಲ್ಲಿ ಮತ ಯಾಚಿಸುತ್ತಿದ್ದಾರೆ. ಮೋದಿಯವರ ಮೇಲೆ ಅವಲಂಬನೆಯಾಗಿದ್ದು, ಜನ ಮೋದಿ ಸರ್ಕಾರದ ವಿರುದ್ಧವಾಗಿದ್ದಾರೆ.ದೇಶದಲ್ಲಿ ಇಂಡಿಯಾ ಪರವಾದ ವಾತಾವರಣವಿದೆ ಎಂದರು.

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!