——————————————-ವಿಧಾನ ಪರಿಷತ್ ಸದಸ್ಯ, ಸಿ ನಾರಾಯಣ ಸ್ವಾಮಿ
ಬಾಗಲಕೋಟೆ: ಲೋಕಾಪೂರದಿಂದ ಧಾರವಾಡ ನೂತನ ರೈಲ್ವೆ ಮಾರ್ಗ ಅನುಷ್ಠಾನಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ತಿಳಿಸಿದರು.

ಶನಿವಾರ ಬಾಗಲಕೋಟೆ ನಗರಕ್ಕೆ ಆಗಮಿಸಿದ್ದ ಸಂಸದ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ರಾಜ್ಯ ರೈಲ್ವೆ ಅಭಿವೃದ್ಧಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷರಾದ ಕುತ್ಬುದ್ದಿನ್ ಕಾಜಿಯವರು ಭೇಟಿಯಾಗಿ ಲೋಕಾಪೂರ ಧಾರವಾಡ ನೂತನ ರೈಲ್ವೆ ಮಾರ್ಗ ಅನುಷ್ಠಾನಕ್ಕಾಗಿ ಕುರಿತು ಮನವರಿಕೆ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕುತ್ಬುದ್ದಿನ್ ಕಾಜಿ ಮತ್ತು ರಾಷ್ಟೀಯ ಬಂಜಾರ ಸಮಾಜದ ಅಧ್ಯಕ್ಷ ಬಲರಾಮ ನಾಯ್ಕ್ ಮಾತನಾಡಿದರು. ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕರು ಹಾಗೂ ಛಲವಾದಿ ನಾರಾಯಣ ಸ್ವಾಮಿಯವರು ಮೊದಲು ದಿಲ್ಲಿ ರೈಲ್ವೆ ಬೋರ್ಡ್ ನ ಅಧ್ಯಕ್ಷರಾಗಿಯೂ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಹಾಗಾಗಿ ರೈಲ್ವೆ ಯೋಜನೆಗಳ ಕುರಿತು ಅವರಿಗೆ ಬಹಳ ಜ್ಞಾನವಿದೆ. ಆದ್ದರಿಂದ ಮುಂಬರುವ ಕೇಂದ್ರ ಬಜೆಟ್ ನಲ್ಲಿ ಲೋಕಾಪೂರದಿಂದ ಧಾರವಾಡ ನೂತನ ರೈಲ್ವೆ ಮಾರ್ಗ ಅನುಮೋದನೆಗಾಗಿ ಸರ್ಕಾರಕ್ಕೆ ಒತ್ತಾಯಿಬೇಕು. ಅದರ ಜತೆಗೆ ಈ ಕುರಿತು ಎಲ್ಲ 28 ಸಂಸದರಿಗೂ ಪತ್ರ ಬರೆಯಬೇಕೆಂದು ಛಲವಾದಿ ನಾರಾಯಣ ಸ್ವಾಮಿಯವರಿಗೆ ಮನವಿ ಮಾಡಿದ್ದೇವೆ ಎಂದು ಹೇಳಿದರು.
ನಂತರ ಸಂಸದ ಚಲವಾದಿ ನಾರಾಯಣ ಸ್ವಾಮಿಯವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಮಾತನಾಡಿ “ ತಾವುಗಳು ಜನರಿಗೆ ಅನುಕೂಲವಾಗುವಂತಹ ಲೋಕಾಪೂರದಿಂದ ಧಾರವಾಡ ನೂತನ ರೈಲ್ವೆ ಮಾರ್ಗ ಯೋಜನೆಯ ಬಗ್ಗೆ ನನ್ನ ಗಮನಕ್ಕೆ ತಂದಿದ್ದಿರಿ. ಈ ಮಾರ್ಗ ಅನುಷ್ಠಾನಕ್ಕಾಗಿ ಸಂಬಂಧಪಟ್ಟ ಎಲ್ಲರಿಗೂ ಪತ್ರ ಬರೆದು ನಾನು ಮಾತನಾಡುತ್ತೇನೆ. ಹಾಗೂ ಈ ಯೋಜನೆಗೆ ಶೀಘ್ರ ಚಾಲನೆ ನೀಡಿ ಬೇಗ ಮುಕ್ತಾಯಗೊಳಿಸುವಂತೆ ಸರಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಭರವಸೆ ನೀಡಿದರು.
ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಂಗೌಡ ಪಾಟೀಲ್, ರಾಷ್ಟೀಯ ಬಂಜಾರ ಸಮಾಜದ ಅಧ್ಯಕ್ಷ ಬಲರಾಮ ನಾಯಕ, ರಾಮದುರ್ಗ ರೈಲ್ವೆ ಹೋರಾಟ ಕ್ರಿಯಾ ಸಮಿತಿಯ ಮುಖಂಡ ಎಂ ಕೆ ಯಾದವಾಡ ಉಪಸ್ಥಿತರಿದ್ದರು.
ವರದಿ: ಮಂಜುನಾಥ ಕಲಾದಗಿ




