ಬೆಂಗಳೂರು : ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ..? ಬಹುತೇಕ ಮಂದಿಗೆ ಇದೇ ಫೇವರೇಟ್ ಟಿಫನ್. ಹೋಟೆಲ್ ಗೆ ಹೋಗೋ ಮಂದಿಯ ಮಾರ್ನಿಂಗ್ ಟೈಂ ಬ್ರೇಕ್ ಫಾಸ್ಟ್ ಗೆ ಫಸ್ಟ್ ಆಪ್ಶನ್ ಅಂದ್ರೆ ಇಡ್ಲಿ. ಈಗ ಇಡ್ಲಿ ಬಗ್ಗೆ ಅಘಾತಕಾರಿ ಹೊರಬಿದ್ದಿದೆ.
ಅದರಲ್ಲೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಗುವ ಇಡ್ಲಿ ಮೋಸ್ಟ್ ಡೇಂಜರಸ್ ಅನ್ನೋ ಮಾಹಿತಿ ಹೊರಬಿದ್ದಿದ್ದು, ಇದು ಕ್ಯಾನ್ಸರ್ ರೋಗಕ್ಕೆ ಆಹ್ವಾನ ನೀಡುತ್ತೆ ಎಂಬ ಅಂಶದಿಂದ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.
ಬೆಂಗಳೂರಿನ ಹಲವೆಡೆ ಇಡ್ಲಿ ತಯಾರಿಕೆಯಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್‌ಗಳನ್ನು ಬಳಸುತ್ತಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು ತಿಳಿದುಬಂದಿದೆ.
ಇಡ್ಲಿ ಮಾಡುವಾಗ ಮಾತ್ರವಲ್ಲದೆ, ಆಹಾರವನ್ನು ಬಡಿಸುವಾಗ ಮತ್ತು ಪ್ಯಾಕ್ ಮಾಡುವಾಗಲೂ ಪ್ಲಾಸ್ಟಿಕ್ ಬಳಕೆ ಹೆಚ್ಚುತ್ತಿದೆ. ಈ ಪ್ಲಾಸ್ಟಿಕ್ ಹಾಳೆಗಳು ಶಾಖಕ್ಕೆ ಒಡ್ಡಿಕೊಂಡಾಗ ಕ್ಯಾನ್ಸರ್ ಕಾರಕವಾದ ಹಾನಿಕಾರಕ ವಸ್ತುಗಳನ್ನು ಬಿಡುಗಡೆ ಮಾಡುತ್ತೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಸುಮಾರು 500 ಇಡ್ಲಿ ಸ್ಯಾಂಪಲ್‌ಗಳನ್ನು ಸಂಗ್ರಹಿಸಲಾಗಿತ್ತು. ಪರೀಕ್ಷೆಗೆ ಒಳಪಡಿಸಿದಾಗ, ಅವುಗಳಲ್ಲಿ 35ಕ್ಕೂ ಹೆಚ್ಚು ಇಡ್ಲಿ ಸ್ಯಾಂಪಲ್‌ಗಳು ಅತ್ಯಂತ ಅಪಾಯಕಾರಿ ಮತ್ತು ಆರೋಗ್ಯಕ್ಕೆ ಹಾನಿಕರ ಎಂದು ಕಂಡುಬಂದಿದೆ. ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಲು ಆಹಾರ ಇಲಾಖೆ ಪ್ಲ್ಯಾನ್ ಮಾಡಿಕೊಂಡಿದೆ.




