Ad imageAd image

ಸಿದ್ದರಾಮಯ್ಯನವರಿಗೆ ಅನ್ಯಾಯವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಸಿದ್ದು ವಿರುದ್ಧ ದುರುದ್ದೇಶಪೂರಿತ ಆರೋಪ; ಹನಮಂತ ಅಪ್ಪನ್ನವರ ಹೇಳಿಕೆ.

Bharath Vaibhav
ಸಿದ್ದರಾಮಯ್ಯನವರಿಗೆ ಅನ್ಯಾಯವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಸಿದ್ದು ವಿರುದ್ಧ ದುರುದ್ದೇಶಪೂರಿತ ಆರೋಪ; ಹನಮಂತ ಅಪ್ಪನ್ನವರ ಹೇಳಿಕೆ.
WhatsApp Group Join Now
Telegram Group Join Now

ಬಾದಾಮಿ:-ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಸಿದ್ದಾರೆ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರವಾಗಿದ್ದು, ಇದು ರಾಜಕೀಯ ದುರುದ್ದೇಶದಿಂದ ಸಿಎಂ ಸಿದ್ದರಾಮಯ್ಯನವರನ್ನು ಗುರಿಯಾಗಿಟ್ಟುಕೊಂಡು ನಡೆಸುತ್ತಿರುವ ಯೋಜಿತ ಪಿತೂರಿಯಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಹನಮಂತ ಅಪ್ಪನ್ನವರ ತಿಳಿಸಿದರು.
ಅವರು ಪಟ್ಟಣದ ಕಾಲೇಜು ರಸ್ತೆಯ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ.

ರಾಜ್ಯಪಾಲರ ಮೂಲಕ ನೋಟಿಸ್ ನೀಡುವ ಮೂಲಕ ಸರಕಾರವನ್ನು ಅಭದ್ರಗೊಳಿಸಲು ಕೇಂದ್ರದ ಬಿಜೆಪಿ ಸರಕಾರ ಯತ್ನಿಸುತ್ತಿದೆ. ಮುಡಾ ಹಗರಣ ಮುಂದಿಟ್ಟುಕೊAಡು ಸಿದ್ದರಾಮಯ್ಯನವರಿಗೆ ಅನ್ಯಾಯವಾದರೆ ಅಹಿಂದ ಸಮುದಾಯ ಉಗ್ರ ಹೋರಾಟ ಮಾಡುತ್ತದೆ ಎಂದ ಅವರು ಸಿದ್ದು ಅವರ ಪತ್ನಿಯ ಜಮೀನುಗಳನ್ನು ಹರಾಜಿನ ಮೂಲಕ ಪಡೆದಿರುವುದರಿಂದ ಸ್ವಯಾರ್ಜಿತ ಜಮೀನಾಗುತ್ತದೆಯೆ ಹೊರತು ಈ ಜಮೀನುಗಳ ಮೇಲೆ ಸರ್ಕಾರದ ಯಾವುದೇ ಹಿತಾಸಕ್ತಿ ಇರುವುದಿಲ್ಲ. ಹಾಗಾಗಿ ಈ ಜಮೀನುಗಳು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ. ಈ ಕುರಿತು ಕಾಯ್ದೆಯು ಸ್ಪಷ್ಟವಾಗಿ ಹೇಳುತ್ತದೆ. ಅಸಂಖ್ಯಾತ ತೀರ್ಪುಗಳೂ ಇವೆ. ಪಿಟಿಸಿಎಲ್ ಜಮೀನುಗಳು ಅಲ್ಲದ ಕಾರಣ ಸರ್ಕಾರದ ಅನುಮತಿ ಅಗತ್ಯವೂ ಇಲ್ಲ ಎಂಬುದು ಕಾನೂನಿನ ಜ್ಞಾನವಿರುವ ಪ್ರತಿಯೊಬ್ಬರಿಗೂ ತಿಳಿದಿರುತ್ತದೆ. ಆದರೆ ಬಿಜೆಪಿ, ಜೆಡಿಎಸ್ ನವರು ಮಾತ್ರ ಇದನ್ನು ರಾಜಕಾರಣಕ್ಕೆ ಬಳಸುತ್ತಿದ್ದಾರೆ ಎಂದರು.

ಪುರಸಭೆ ಸದಸ್ಯ ಮಂಜುನಾಥ ಹೊಸಮನಿ ಮಾತನಾಡಿ ಈ ಎಲ್ಲ ವ್ಯವಹಾರಗಳು 2010 ಕ್ಕಿಂತ ಮುಂಚೆ ನಡೆದಿವೆ. ಇವು ಸಿದ್ದರಾಮಯ್ಯ ನವರಿಗೆ ಸಂಬಧಪಟ್ಟಿದ್ದಲ್ಲ. ಆದರೂ ಸಹ ಬಿಜೆಪಿಯವರು ಈ ಸಣ್ಣ ವಿಚಾರವನ್ನು ರಾಜಕಾರಣಕ್ಕೆ ಬಳಸುತ್ತಿರುವ ಕಾರಣ ಈ ವಿಚಾರಗಳನ್ನು ಪ್ರಸ್ತಾಪಿಸಬೇಕಾಗಿದೆ. ಬಿ.ಜೆ.ಪಿ ಯವರು ರಾಜ್ಯಪಾಲರಿಗೆ ನೀಡಿರುವ ಮನವಿ/ದೂರಿನಲ್ಲಿ ಸದರಿ ಜಮೀನುಗಳನ್ನು ಡಿ-ನೋಟಿಫಿಕೇಶನ್ ಮಾಡಲು ಮುಡಾದಿಂದ ಪ್ರಸ್ತಾವನೆ ಬಂದಿರಲಿಲ್ಲ, ಅರ್ಜಿದಾರರು ಅರ್ಜಿಯೂ ಕೊಟ್ಟಿರಲಿಲ್ಲ, ಆದರೂ ಡಿ.ನೋಟಿಫಿಕೇಶನ್ ನಡೆದಿದೆ ಎಂದು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ.

ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿ ಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ವರದಿ ಬಂದ ನಂತರ ಯಾರೆಲ್ಲಾ ತಪ್ಪಿತಸ್ಥರಿದ್ದಾರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬಿಜೆಪಿ, ಜೆಡಿಎಸ್ ನವರು ಮುಡಾದ ವಿಚಾರದಲ್ಲೂ, ಸಿದ್ದರಾಮಯ್ಯ ನವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಬಿಜೆಪಿ ಹಾಗೂ ಜೆಡಿಎಸ್ ಪಾರ್ಲಿಮೆಂಟಿನಲ್ಲಿ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ – ಜೆಡಿಎಸ್ ಸಂಸದರು ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಪ್ರಶ್ನೆ ಮಾಡಿಲ್ಲ. ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು, ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಹತಾಶರಾಗಿದ್ದಾರೆ. ಸಿದ್ದರಾಮಯ್ಯ ನವರ ನೇತೃತ್ವದಲ್ಲಿ 135 ಸ್ಥಾನವನ್ನು ಗೆದ್ದ ಬಳಿಕ ರಾಜಕೀಯ ಪ್ರೇರಿತವಾದ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ.

ಸಿದ್ದರಾಮಯ್ಯ ನವರ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಎರಡನೇ ಬಾರಿ ಸಿದ್ದರಾಮಯ್ಯ ನವರು ಸಿಎಂ ಆಗಿರುವುದು ಅವರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಿದ್ದರಾಮಯ್ಯನವರಿಗೆ ಅನ್ಯಾಯವಾದರೆ ರಾಜ್ಯಾದ್ಯಂತ ಅಹಿಂದ ಸಮುದಾಯ ಕೇಂದ್ರದ ಬಿಜೆಪಿ ಸರಕಾರದ ಹಾಗೂ ವಿರೋಧ ಪಕ್ಷದವರ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ. ದಂಗೆ ಏಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಟಿಯಲ್ಲಿ ಮುಖಂಡರಾದ ಬಿ.ಎಸ್.ಬೇಲೂರಪ್ಪನ್ನವರ, ಆರ್.ಎಫ್.ಗೌಡರ, ಶಶಿಧರ ಗೌಡರ, ಬಿ.ಎಂ.ಕ0ಬಳಿ, ಆರ್.ಬಿ.ಹುಲ್ಲೂರ, ಹನಮಂತ ಜೋಗಿನ, ಹುಲ್ಲಪ್ಪ ಜೇಮಕೊಳ್ಳರ, ವೈ.ವೈ.ದಳವಾಯಿ, ಬಿ.ಎಸ್.ಹಿಪ್ಪರಗಿ, ಕಾಮೇಶ ಜಾಲಿಹಾಳ, ವಿಜಯ ಹೊರಪೇಟಿ, ಬಿ.ಎಸ್.ಹನಮಸಾಗರ, ಶ್ರೀಕಾಂತಗೌಡ ಗೌಡರ, ಬೀರಪ್ಪ ಪೆಂಟಿ, ಬಿ.ಸಿ.ಬಸರಿ, ಶರಣಪ್ಪ ತಮಿನಾಳ, ಮಹಾಂತೇಶ ಕುರಿ, ಹನಮಂತ ಡೊಳ್ಳಿನ, ಎಸ್.ಆರ್.ಲಿಂಗದಾಳ, ಬಸವರಾಜ ಡೊಳ್ಳಿನ, ಎಚ್.ಎಚ್.ಬಿಳೇಲಿ, ಎಸ್.ಬಿ.ನಾಯ್ಕರ, ಎಸ್.ಕೆ.ಹೆಬ್ಬಳ್ಳಿ ಹಾಜರಿದ್ದರು.

ವರದಿ:- ರಾಜೇಶ್. ಎಸ್. ದೇಸಾಯಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!