Ad imageAd image

ಜಗದೀಶ್ ಶೆಟ್ಟರ್ ಗೆದ್ದರೆ ಕೇಂದ್ರ ಸಚಿವರಾಗುತ್ತಾರೆ: ಗಾಲಿ ಜನಾರ್ಧನ ರೆಡ್ಡಿ

Bharath Vaibhav
ಜಗದೀಶ್ ಶೆಟ್ಟರ್ ಗೆದ್ದರೆ ಕೇಂದ್ರ ಸಚಿವರಾಗುತ್ತಾರೆ: ಗಾಲಿ ಜನಾರ್ಧನ ರೆಡ್ಡಿ
WhatsApp Group Join Now
Telegram Group Join Now

ಬೆಳಗಾವಿ:- ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸಿದರೆ ಅವರು ಮೋದಿಯವರ ಜೊತೆಗೆ ಸೇರಿ ಕೇಂದ್ರದ ಸಚಿವರಾಗಿ ಬೆಳಗಾವಿಯ ಸಮಗೃ ಅಭಿವೃದ್ಧಿ ಮಾಡುತ್ತಾರೆ ಎಂದು ಗಂಗಾವತಿ ಶಾಸಕ ಗಾಲಿ ಜನಾರ್ಧನ ರೆಡ್ಡಿ ಅವರು ಹೇಳಿದ್ದಾರೆ.‌

ಬುಧವಾರ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ರಾಮದುರ್ಗ ಮತಕ್ಷೇತ್ರದ ಸುರೇಬಾನ ಗ್ರಾಮದಲ್ಲಿ ಜರುಗಿದ ಬಹಿರಂಗ ಸಮಾವೇಶದಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಅವರು 6 ಬಾರಿ ಶಾಸಕರಾಗಿ ಎಲ್ಲ ಹುದ್ದೆಗಳ ಅನುಭವ ಅವರಿಗೆ ಇದೆ. ಕಾಂಗ್ರೆಸ್ ಸರ್ಕಾರ ಪೊಳ್ಳು ಗ್ಯಾರಂಟಿಗಳಿಂದ ಅಧಿಕಾರಕ್ಕೆ ಬಂದಿದೆ.‌ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದೆ.‌ ಅನೇಕ ವಸ್ತುಗಳ ಬೆಲೆ ಏರಿಕೆ ಆಗಿದೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ಒಂದು ಕೈಯಿಂದ ಕೊಟ್ಟು ಮತ್ತೊಂದು ಕೈಯಿಂದ ಕಸಿದುಕೊಳ್ಳವ ಕೆಲಸ ಕಾಂಗ್ರೆಸ್ ಮಾಡುತ್ತಿದೆ ಎಂದರು.

ಕಾಂಗ್ರೆಸ್ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಒಬ್ಬ ಮನುಷ್ಯ ಮರಣ ಹೊಂದಿದ ನಂತರ 55% ಆಸ್ತಿ ಸರ್ಕಾರದ ಪಾಲಾಗಲಿದೆ. ಹಾಗಾಗಿ ನಾವು ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಅವರ ಗ್ಯಾರಂಟಿಗಳಿಗೆ ನಾವು ಆಸೆ ಪಟ್ಟರೆ ನಿಮ್ಮ ಆಸ್ತಿ 55% ಕಿತ್ತುಕೊಳ್ಳುತ್ತಾರೆ. ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಲು ಕಾಂಗ್ರೆಸ್ ಜನರಿಗೆ ಸುಳ್ಳು ಭರವಸೆ ನೀಡುತ್ತಿದ್ದಾರೆ ಎಂದು ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ಬಳಿಕ ಮಾತನಾಡಿದ ಶಂಕರಪಾಟೀಲ್ ಮುನೆನಕೊಪ್ಪ ಅವರು, ನರೇಂದ್ರ ಮೋದಿವರನ್ನು ಮೂರನೇ ಸಲ ಪ್ರಧಾನಿ ಮಾಡಬೇಕು ಎಂದು ಎಲ್ಲರೂ ತೀರ್ಮಾನಕ್ಕೆ ಬಂದಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದ ವರೆಗೆ ಪ್ರಪಂಚದ ಪ್ರತಿಯೊಂದು ಹಳ್ಳಿಯಲ್ಲೂ ಭಾರದ ಮುಂದಿನ ಪ್ರಧಾನಿ ನರೇಂದ್ರ ಮೋದಿಯವರು ಆಗಬೇಕು ಎಂದು ಜನ ಬಯಸಿದ್ದಾರೆ.‌ ಸೂರ್ಯ ಚಂದ್ರ ಹುಟ್ಟುವುದು ಎಷ್ಟು ಸತ್ಯ ಇದೆ, ಅದೇ ರೀತಿ ನರೇಂದ್ರ ಮೋದಿ ಮೂರನೆ ಸಲ ಪ್ರಧಾನಿ ಆಗುವುದು ಅಷ್ಟೇ ಸತ್ಯ ಇದೆ. ನರೇಂದ್ರ ಮೋದಿ ಪ್ರಧಾನಿಯಾದರೆ ಇಲ್ಲಿಂದ ಜಗದೀಶ್ ಶೆಟ್ಟರ್ ಅವರನ್ನು ಗೆಲ್ಲಿಸಬೇಕು.

ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಅವರು ರಾಜ್ಯಕ್ಕೆ ಅನೇಕ ಕುಡುಗೆ ಕೊಟ್ಟಿದ್ದಾರೆ. ಬರಗಾಲ ಬಂದಾಗ ಹಾಗೂ ಹೆಚ್ಚು ಮಳೆ ಆದಾಗ ರೈತರ ಖಾತೆಗೆ ನೇರವಾಗಿ 25 ಸಾವಿರ ‌ವರ್ಗವಣೆ ಮಾಡಿದ ಕೀರ್ತಿ ಜಗದೀಶ್ ಶೆಟ್ಟರ್ ಹಾಗೂ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ರಾಜ್ಯದಲ್ಲಿ ಬರಗಾಲ ಬಂದರು ರೈತರಿಗೆ ಪರಿಹಾರ ನೀಡಲು ಈಗಿನ ಕಾಂಗ್ರೆಸ್ ಸರ್ಕಾರಕ್ಕೆ ಆಗುತ್ತಿಲ್ಲ. ಹಾಗಾಗಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು‌ ಎಂದು ತಿಳಿಸಿದರು.

ಈ ವೇಳೆ ಮಾಜಿ ವಿಧಾನಪರಿಷತ್ ಸದಸ್ಯರಾದ ಎಂ.ಡಿ. ಲಕ್ಷ್ಮೀನಾರಾಯಣ, ಮಹಾಂತೇಶ ಕವಟಗಿಮಠ, ಮಾಜಿ ಶಾಸಕರಾದ ಮಹಾದೇವಪ್ಪ ಯಾದವಾಡ, ರಾಜ್ಯ ನೇಕಾರ ಪ್ರಕೋಷ್ಠ ಸಂಚಾಲಕರಾದ ಬಿ.ಎಸ್.ಸೋಮಶೇಖರ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುಭಾಷ ಪಾಟೀಲ, ಮಂಡಲ ಅಧ್ಯಕ್ಷರಾದ ರಾಜೇಶ ಬಿಳಗಿ, ಪ್ರಮುಖರಾದ ರಮೇಶ ದೇಶಪಾಂಡೆ, ರೇಣಪ್ಪ ಸೋಮಗೊಂಡ, ಪಿ.ಎಫ್. ಪಾಟೀಲ ಹಾಗೂ ಪಕ್ಷದ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಪ್ರತೀಕ ಚಿಟಗಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!