ಬೀದರ್: ರಾಜ್ಯದಲ್ಲಿ ಹೆಚ್ಚುತ್ತಿರುವ ಮದ್ಯದ ಹಾವಳಿ ಮತ್ತು ಸರ್ಕಾರದ ಅಬಕಾರಿ ನೀತಿಯ ವಿರುದ್ಧ ಬಸವಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗರ್ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮದ್ಯ ನಿಷೇಧ ಮಾಡದಿದ್ದರೆ ಸಿಎಂ ತಮ್ಮ ಪಾಲಿಗೆ ರಾಕ್ಷಸನಂತೆ ಕಾಣುತ್ತಾರೆ ಎಂದು ಅವರು ಗುಡುಗಿದ್ದಾರೆ.
ಬೀದರ್‌ನ ಬಸವಕಲ್ಯಾಣದಲ್ಲಿ ಮಾತನಾಡಿದ ಶರಣು ಸಲಗರ್, ಸಾರಾಯಿ ಬಂದ್ ಮಾಡದ ಸಿಎಂ ಸಿದ್ದರಾಮಯ್ಯ ಅವರು ನನ್ನ ಪಾಲಿಗೆ ರಾಕ್ಷಸನಂತೆ ಕಾಣುತ್ತಿದ್ದಾರೆ.
ಗ್ಯಾರೆಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಅಬಕಾರಿ ಅಧಿಕಾರಿಗಳಿಗೆ ಟಾರ್ಗೆಟ್ ನೀಡುತ್ತಿದೆ. ಇದರಿಂದ ಕರ್ನಾಟಕವು ನಶಾ ರಾಜ್ಯವಾಗಿ ಬದಲಾಗುತ್ತಿದೆ. ಕಿರಾಣಿ ಅಂಗಡಿಗಳು ಮತ್ತು ಪಾನ್ ಶಾಪ್‌ಗಳು ವೈನ್ ಶಾಪ್‌ಗಳಾಗಿ ಮಾರ್ಪಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.




