ಬೆಂಗಳೂರು : ಡಿಕೆ ಶಿವಕುಮಾರ್ ಅವರೇ ಮುಂದಿನ ಸಿಎಂ ಎಂದು ಕಾಂಗ್ರೆಸ್ ನಾಯಕ ಡಾ.ಎಂ.ವೀರಪ್ಪ ಮೊಯ್ಲಿ ಹೇಳಿಕೆಗೆ ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಕಷ್ಟಪಟ್ಟು ಕೆಲಸ ಮಾಡಿದರೆ, ಅವರಿಗೆ ನಾಳೆ ಬಹುಮಾನ ಸಿಗುತ್ತದೆ ಅವರು ಏನೇ ಹೇಳಿದರೂ ಅದು ಅವರ ಅಭಿಪ್ರಾಯ ಎಂದು ಹೇಳಿದರು.
ಈ ಬಗ್ಗೆ ಮಾತನಾಡಿದ ಅವರು, ಮೊಯ್ಲಿ ಅಥವಾ ಬೇರೆ ಯಾರೂ ಡಿಕೆ ಶಿವಕುಮಾರ್ ಇಂದು ಅಥವಾ ನಾಳೆ ಸಿಎಂ ಆಗಲಿದ್ದಾರೆ ಎಂದು ಹೇಳಿಲ್ಲ. ಒಂದು ದಿನ ಅವರ ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಕ್ಕೆ ಸಿಗುತ್ತದೆ. ಏನೇ ಇದ್ದರೂ ಅದನ್ನು ಹೈಕಮಾಂಡ್ ಅದನ್ನು ನಿರ್ಧರಿಸುತ್ತದೆ ಎಂದರು.
ರಾಜ್ಯದಲ್ಲಿ ಸದ್ಯದ ಮಟ್ಟಿಗೆ ಸಿಎಂ ಬದಲಾವಣೆ ಕೂಗು ಕಡಿಮೆಯಾಗಿದೆ. ನಮ್ಮ ಜವಾಬ್ದಾರಿ ತುಂಬಾ ಸ್ಪಷ್ಟವಾಗಿವೆ, ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿ ಅಷ್ಟೇ.. ಸಿಎಂ ಆಗಬೇಕು ಎಂದು ಎಲ್ಲರಿಗೂ ಆಸೆ ಇರುತ್ತದೆ, ಕಷ್ಟಪಟ್ಟು ಕೆಲಸ ಮಾಡಿದರೆ, ಅವರಿಗೆ ನಾಳೆ ಬಹುಮಾನ ಸಿಗುತ್ತದೆ ಎಂದು ಖರ್ಗೆ ಹೇಳಿದರು.
ಇದೇ ವೇಳೆ ಬಿಜೆಪಿ ಪ್ರತಿಭಟನೆಯ ಬಗ್ಗೆ ಮಾತನಾಡಿದ್ದು, ಬಿಜೆಪಿಯು ರಾಜ್ಯಪಾಲರು ಮತ್ತು ರಾಜ್ಯಪಾಲರ ಕಚೇರಿಯನ್ನು ರಕ್ಷಿಸುವ ಬದಲು ಕರ್ನಾಟಕ ಮತ್ತು ಕನ್ನಡಿಗರನ್ನು ಪದೇ ಪದೇ ಅವಮಾನಿಸುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಬಿಜೆಪಿ ಮೊದಲು ಪ್ರತಿಭಟನೆ ನಡೆಸಬೇಕು ಎಂದು ಆಗ್ರಹಿಸಿದರು.
ಸೀಮಿತಿ ನಿರ್ಣಯ, NEP 3-ಭಾಷಾ ನೀತಿ, ಎಲ್ಲವನ್ನೂ ದಕ್ಷಿಣ ರಾಜ್ಯಗಳ ಮೇಲೆ ಬಲವಂತವಾಗಿ ಹೇರಲಾಗುತ್ತಿದೆ. ಬಿಜೆಪಿಗೆ ನಾಚಿಕೆ ಅನ್ನೋದು ಇದ್ದರೆ ಈ ಕೂಡಲೇ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.




