Ad imageAd image

ಬೆಳೆ ವಿಮೆ ಯೋಜನೆ ಅನುಷ್ಠಾನ ಕೃಷಿ ಇಲಾಖೆಗೆ 2ನೇ ಸ್ಥಾನ

Bharath Vaibhav
ಬೆಳೆ ವಿಮೆ ಯೋಜನೆ ಅನುಷ್ಠಾನ ಕೃಷಿ ಇಲಾಖೆಗೆ 2ನೇ ಸ್ಥಾನ
WhatsApp Group Join Now
Telegram Group Join Now

ಬೆಂಗಳೂರು: ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನಕ್ಕಾಗಿ ಕರ್ನಾಟಕ ರಾಜ್ಯಕ್ಕೆ ದ್ವಿತೀಯ ಸ್ಥಾನ ದೊರೆತಿದೆ.

ದೊಡ್ಡ ರಾಜ್ಯಗಳ ಪೈಕಿ ಯೋಜನೆಯ ಅನುಷ್ಠಾನದಲ್ಲಿ ಒಟ್ಟಾರೆ ಪ್ರಗತಿಯಲ್ಲಿ ಕರ್ನಾಟಕ ರಾಜ್ಯವು ಮುಂಚೂಣಿಯಲ್ಲಿದ್ದು, ಕೃಷಿ ಇಲಾಖೆಗೆ ಪ್ರಶಸ್ತಿ ಸಂದಿದೆ.

2024-25 ನೇ ಸಾಲಿನಲ್ಲಿ 27,04,166 ರೈತರು ನೋಂದಣೆ ಮಾಡಿಕೊಂಡಿದ್ದು, ಅರ್ಹ 11,85,642 ರೈತರಿಗೆ ರೂ.2094 ಕೋಟಿ ಪರಿಹಾರ ಮೊತ್ತವನ್ನು ಇತ್ಯರ್ಥಪಡಿಸಲಾಗಿರುತ್ತದೆ.

2024-25 ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಸರ್ಮಪಕ ಅನುಷ್ಠಾನಕ್ಕಾಗಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯ, ಭಾರತ ಸರ್ಕಾರ ಇವರು ಪ್ರಶಂಸಾ ಪತ್ರವನ್ನು ನೀಡಿರುತ್ತಾರೆ.

ಕೃಷಿ ಇಲಾಖೆಯ ಕೃಷಿ ಆಯುಕ್ತರು ಹಾಗೂ ಕೃಷಿ ನಿರ್ದೇಶಕರು ಇವರು ದಿ: 18.01.2026 ರಂದು ಬೆಂಗಳೂರಿನಲ್ಲಿ ನಡೆದ 13 ನೇಯ ರಾಷ್ಟ್ರೀಯ ಸಮ್ಮೇಳನದಂದು ಕಾರ್ಯದರ್ಶಿ, ಸಹಕಾರ ಸಚಿವಾಲಯ, ಭಾರತ ಸರ್ಕಾರ ಇವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!