ಹುಬ್ಬಳ್ಳಿ: ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಂತ ಕಾಮುಕನೊಬ್ಬನನ್ನು ಸ್ಥಳೀಯರು ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗ ಥಳಿಸಿದಂತ ಘಟನೆ ನಡೆದಿದೆ.
ಹುಬ್ಬಳ್ಳಿಯ ಈಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳವನ್ನು ಕಾಮುಕ ನೀಡುತ್ತಿದ್ದನು ಎನ್ನಲಾಗಿದೆ.
ಕಾಮುಕನೊಬ್ಬ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಲೈಂಗಿಕ ಕಿರುಕುಳವನ್ನು ನೀಡುತ್ತಿದ್ದನಂತೆ. ಇಂದು ಕೂಡ ಅದೇ ಕೆಲಸ ಮಾಡಿದ ವೇಳೆಯಲ್ಲಿ ಮಹಿಳೆಯೊಂದಿಗೆ ಸ್ಥಳೀಯರು ಸೇರಿ ಮರಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.




