Ad imageAd image

ಕಲ್ಬುರ್ಗಿ ಜಿಲ್ಲೆಯಲ್ಲಿ ಹುಚ್ಚುನಾಯಿ ಅಟ್ಟಹಾಸ : ಐದು ಮಕ್ಕಳ ಎದೆ, ಕಿವಿ, ಕಾಲು ಕಚ್ಚಿ ವಿಕೃತಿ 

Bharath Vaibhav
ಕಲ್ಬುರ್ಗಿ ಜಿಲ್ಲೆಯಲ್ಲಿ ಹುಚ್ಚುನಾಯಿ ಅಟ್ಟಹಾಸ : ಐದು ಮಕ್ಕಳ ಎದೆ, ಕಿವಿ, ಕಾಲು ಕಚ್ಚಿ ವಿಕೃತಿ 
WhatsApp Group Join Now
Telegram Group Join Now

ಕಲಬುರ್ಗಿ : ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಲ್ಬುರ್ಗಿ ಜಿಲ್ಲೆಯಲ್ಲಿ ಹುಚ್ಚುನಾಯಿ ಅಟ್ಟಹಾಸ ಮೆರೆದಿದೆ.

ನಗರದ ದೇವಿ ನಗರದಲ್ಲಿ ಬೀದಿ ನಾಯಿಗಳ ಅಟ್ಟಹಾಸಕ್ಕೆ ಐದು ಮಕ್ಕಳು ಗಾಯಗೊಂಡಿದ್ದಾರೆ.ಮನೆ ಮುಂದೆ ಆಟವಾಡುತ್ತಿದ್ದಾಗ ಹುಚ್ಚುನಾಯಿ ಒಂದು ದಾಳಿ ಮಾಡಿದೆ.

ದಾಳಿಯ ಪರಿಣಾಮ ಮಕ್ಕಳ ಕಣ್ಣು ಕಿವಿ ಮತ್ತು ಎದೆ ಭಾಗಗಳಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಾಳು ಐವರು ಮಕ್ಕಳನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪಾಲಿಕೆ ಅಧಿಕಾರಿಗಳ ವಿರುದ್ಧ ದೇವಿ ನಗರ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿ ದಿನ ನಾಯಿಗಳ ದಾಳಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಪಾಲಿಕೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!