Ad imageAd image

ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ :  ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ

Bharath Vaibhav
ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ :  ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ
WhatsApp Group Join Now
Telegram Group Join Now

ಬೆಂಗಳೂರು: ಆಂಧ್ರ ಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿ ಹಕ್ಕಿಜ್ವರ ಉಲ್ಬಣವಾಗಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದ ಗಡಿ ಜಿಲ್ಲೆಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ತೆಲಂಗಾಣ, ಆಂಧ್ರ ಪ್ರದೇಶಗಳಲ್ಲಿ ಕೋಳಿಗಳ ಮಾರಣಹೋಮವೇ ನಡೆಯುತ್ತಿದೆ. ಸಂಯುಕ್ತ ನೆಲ್ಲೂರು ಜಿಲ್ಲೆಯ ಗುಡೂರು, ಸುಳ್ಳೂರುಪೇಟ, ನಾಯ್ಡುಪೇಟ ಮತ್ತು ವೆಂಕಟಗಿರಿ ಪ್ರದೇಶಗಳಲ್ಲಿ ಚಿಕನ್ ಶಾಪ್​ಗಳಲ್ಲಿ ನೂರಾರು ಕೋಳಿಗಳು ಕೋಳಿ ಖರೀದಿಗೆ ಜನ ಹಿಂದೇಟು ಹಾಕುತ್ತಿದ್ದು, ಚಿಕನ್ ಶಾಪ್ ಮಾಲೀಕರು ಅಂಗಡಿಗಳನ್ನು ಬಂದ್ ಮಾಡುತ್ತಿದ್ದಾರೆ.

ಮಹಾರಾಷ್ಟ್ರದ 7 ಜಿಲ್ಲೆಗಳಲ್ಲಿ ಹುಲಿ, ಚಿರತೆ, ಕಾಗೆಗಳಲ್ಲಿಯೂ ಹಕ್ಕಿ ಜ್ವರ ಕಾಣಿಸಿಕೊಂಡಿದೆ. ಆಂಧ್ರ, ತೆಲಂಗಾಣದಲ್ಲಿ H5N1 ವೈರಸ್ ನಿಂದ ಉಂಟಾಗುವ ಸೋಂಕಿಗೆ ಕೋಳಿಗಳು ಸಾವನ್ನಪ್ಪುತ್ತಿವೆ. ಎರಡೂ ರಾಜ್ಯಗಳಲ್ಲಿ ಕೋಳಿಗಳ ಮಾರಣಹೋಮ ನಡೆದಿದೆ.

ಈ ಹಿನ್ನೆಲೆಯಲ್ಲಿ ಬೇರೆ ರಾಜ್ಯಗಳಿಂದ ಸೋಂಕು ಹರಡುವ ಭೀತಿ ಹಿನ್ನೆಲೆಯಲ್ಲಿ ಬೀದರ್‌, ಬೆಳಗಾವಿ, ಬಳ್ಳಾರಿ ಸೇರಿದಂತೆ ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಬೇರೆ ರಾಜ್ಯಗಳಿಂದ ಬರುವ ಕೋಳಿ ಹಾಗೂ ಮೊಟ್ಟೆಗಳಿಗೆ ನಿರ್ಬಂಧ ವಿಧಿಸಲಾಗಿದೆ.

ಹಕ್ಕಿ ಜ್ವರ ವೈರಸ್ ಸೋಂಕಿತ ಕೋಳಿ ಮಾಂಸ ತಿನ್ನುವುದರಿಂದ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎಂದು ಸರ್ಕಾರ ಸಾರ್ವಜನಿಕರಿಗೆ ಎಚ್ಚರಿಕೆ ನೀಡುವ ಮೂಲಕ ಕಳವಳ ವ್ಯಕ್ತಪಡಿಸಿದ್ದು, ಇದು ಕೋಲಾಹಲಕ್ಕೆ ಮತ್ತಷ್ಟು ಉತ್ತೇಜನ ನೀಡಿದೆ. ಪರಿಣಾಮವಾಗಿ ಕೋಳಿ ಮಾಂಸದ ಬೆಲೆ ಕುಸಿದಿದೆ.

 

WhatsApp Group Join Now
Telegram Group Join Now
Share This Article
error: Content is protected !!