ಚಿಕ್ಕೋಡಿ : ತಾಲೂಕಿನ ನಾಯಿಂಗ್ಲಜ್ ಗ್ರಾಮದ ಸರಕಾರಿ ಕನ್ನಡ ಪ್ರೌಢ ಶಾಲೆಯಲ್ಲಿ 65 ಲಕ್ಷ ರೊ ಅನುದಾನದಲ್ಲಿ ನಿರ್ಮಿತ 3 ಹೊಸ ಶಾಲಾ ಕೊಠಡಿಗಳನ್ನು ಚಿಕ್ಕೋಡಿ ಸದಲಗ ಶಾಸಕರಾದ ಶ್ರೀ ಗಣೇಶ ಥ್ಅಣ್ಣಾ ಹುಕ್ಕೇರಿ ಅವರು ಉದ್ಘಾಟಿಸಿ ಸಮುದಾಯದ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಮಹತ್ವವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಒಳ್ಳೆಯ ಗುಣಮಟ್ಟದ ಶಿಕ್ಷಣ ಉತ್ತಮ ಸೌಕರ್ಯಗಳು ಅಗತ್ಯ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ನಮ್ಮ ಪ್ರಯತ್ನ ನಿರಂತರವಾಗಿರಲಿದೆ ಎಂದು ಹೇಳಿದರು.
ಈ ವೇಳೆ ಗ್ರಾಮದ ಹಿರಿಯ ಮುಖಂಡರು, ಗ್ರಾಮಸ್ಥರು ಹಾಗೂ ಎಸ್ ಡಿ ಎಂ ಸಿ ಸದಸ್ಯರು, ಶಾಲಾ ಸಿಬ್ಬಂದಿ ವರ್ಗದವರು ಸೇರಿದಂತೆ ಪುಠಾಣಿ ಮಕ್ಕಳು ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ




