————————————ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾರ್ಯಕ್ರಮ
ಸೇಡಂ: ತಾಲೂಕಿನ ಸಿಲಾರಕೋಟ್ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಬಿಸಿಯೂಟ ಉದ್ಘಾಟನೆ ಮಾಡಲಾಯಿತು. ಶಾಲೆ ಪ್ರಾರಂಭವಾಗಿ ಸುಮಾರು ವರ್ಷಗಳು ಕಳೆದರು ಇದುವರೆಗೂ ಇಲ್ಲಿ ಬಿಸಿಯೂಟ ವ್ಯವಸ್ಥೆ ಇರಲಿಲ್ಲಾ.

ಈ ವಿಷಯವನ್ನು ಗಮನಕ್ಕೆ ತೆಗೆದುಕೊಂಡ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷರಾದ ಅನಿಲ್ ಪೊಟೇಲಿ ಅವರು ತಾಲೂಕಿನ ಎಲ್ಲಾ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಈ ವರ್ಷ ಈ ಶಾಲೆಯಲ್ಲಿ ಬಿಸಿಯೂಟ ಯೋಜನೆ ರೂಪಿಸಲಾಗಿದೆ. ಇದಕ್ಕೆ ಗ್ರಾಮಸ್ಥರ ಸಹಕಾರ ಕೂಡ ಅನೇಕ ಇದೆ ಎಂದು ಶಾಲೆಯ ಮುಖ್ಯ ಗುರುಗಳಾದ ಈರಪ್ಪ ಪೂಜಾರಿ ಅವರು ತಿಳಿಸಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಊರಿನ ಯುವ ಮುಖಂಡರಾದ ಶ್ರೀನಿವಾಸ್ ರೆಡ್ಡಿ ಪಾಟೀಲ್ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷರಾದ ಅನಿಲ್ ಪೊಟೇಲಿ ಅವರು ಮತ್ತು ಪತ್ರಕರ್ತ ವೆಂಕಟಪ್ಪ ಕೆ ಸುಗ್ಗಾಲ್ ಹಾಗೂ ಸಿ ಆರ್ ಪಿ ಸಾಯಿಬಣ್ಣ ಪೂಜಾರಿ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು.
ಇದೇ ವೇಳೆ ಕಾರ್ಯಕ್ರಮವನ್ನು ಉದ್ದೇಶಿಸಿ ಸಿ ಆರ್ ಪಿ ಸಾಯಿಬಣ್ಣ ಪೂಜಾರಿ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಗ್ರಾಮದ ಯುವ ಮುಖಂಡರಾದ ಶ್ರೀನಿವಾಸ್ ರೆಡ್ಡಿ ಪಾಟೀಲ್, ಸಿ ಆರ್ ಪಿ ಸಾಯಿಬಣ್ಣ ಪೂಜಾರಿ, ಮಹಿಪಾಲ ರೆಡ್ಡಿ, ಪ್ರಕಾಶ್ ಕಲಾಲ್, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾಧ್ಯಕ್ಷರಾದ ಅನಿಲ್ ಪೊಟೇಲಿ, ಶಾಲೆಯ ಮುಖ್ಯ ಗುರುಗಳಾದ ಈರಪ್ಪ ಪೂಜಾರಿ ಸೇರಿದಂತೆ ಶಾಲೆಯ ಮುದ್ದುಮಕ್ಕಳು ಮತ್ತು ಪೋಷಕರು ಇನ್ನಿತರರು ಉಪಸ್ಥಿತರಿದ್ದರು.
ವರದಿ: ವೆಂಕಟಪ್ಪ ಕೆ ಸುಗ್ಗಾಲ್




