Ad imageAd image

ನರೇಗಾ ಕೂಲಿಕಾರರಿಗೆ ಆರೋಗ್ಯ ಶಿಬಿರ ಕಾರ್ಯಕ್ರಮ ಉದ್ಘಾಟನೆ

Bharath Vaibhav
ನರೇಗಾ ಕೂಲಿಕಾರರಿಗೆ ಆರೋಗ್ಯ ಶಿಬಿರ ಕಾರ್ಯಕ್ರಮ ಉದ್ಘಾಟನೆ
WhatsApp Group Join Now
Telegram Group Join Now

ಇಲಕಲ್ :-ತಾಲೂಕಿನ ಹಿರೇಓತಗೇರಿ ಗ್ರಾಮ ಪಂಚಾಯಿತಿಗೆ ಬೆಂಗಳೂರಿನಿಂದ ಕೆ.ಎಚ್.ಪಿ.ಟಿ. ಮುಖ್ಯಸ್ಥರು ಹಾಗೂ ಸಹೋದ್ಯೋಗಿಗಳು ಆಗಮಿಸಿ & ಸಹಾಯಕ ನಿರ್ದೇಶಕರು (ಗ್ರಾ. ಉ) ಹಾಗೂ ಕೆಎಚ್ ಪಿಟಿ ಮುಖ್ಯಸ್ಥರು ರಿಬ್ಬನ್ ಕಟ್ ಮಾಡುವ ಮೂಲಕ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

• ನರೇಗಾ ಕೂಲಿಕಾರರಿಗೆ ಆರೋಗ್ಯ ಶಿಬಿರ ಏರ್ಪಡಿಸಲಾಯಿತು.
• ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಹಾಗೂ ವಲಸೆ ಯಾಕ್ರಿ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ಅಭಿಯಾನ ಆಯೋಜಿಸಲಾಗಿತ್ತು.
• ಸಹಾಯಕ ನಿರ್ದೇಶಕರು (ಗ್ರಾ. ಉ ,) ಕೂಲಿ ಕಾರ್ಮಿಕರಿಗೆ ಮತದಾನ ಜಾಗೃತಿ ಮೂಡಿಸಿ, ಕಡ್ಡಾಯವಾಗಿ ಮತದಾನ ಮಾಡುವಂತೆ ಸಹಾಯಕ ನಿರ್ದೇಶಕರು (ಗ್ರಾ. ಉ ) ತಿಳಿಸಿದರು.
• ಬಳಿಕ ಮತದಾರರ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಜೊತೆಗೆ ಕೂಲಿ ಗುಳೆ ಹೋಗದಂತೆ ತಡೆಯಲು ನಿಮ್ಮೂರಲ್ಲೇ ನರೇಗಾ ಯೋಜನೆಯಡಿ ಕೂಲಿ ಕೆಲಸ ಸಿಗುತ್ತಿರುವ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, TC, ಐಇಸಿ ಸಂಯೋಜಕರು, , ಬಿಎಫ್ ಟಿ ಅವರು, ಬಿಲ್ ಕಲೆಕ್ಟರ್, ಕಾಯಕ ಬಂಧುಗಳು ಉಪಸ್ಥಿತರಿದ್ದರು.

ವರದಿ ದಾವಲ್. ಶೇಡಂ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!