ರಾಯಬಾಗ : ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಇಂದು ಕುಡಚಿ ವಿಧಾನಸಭಾ ಮತಕ್ಷೇತ್ರದ ಶಾಸಕರು ಶ್ರೀ ಮಹೇಂದ್ರ ತಮ್ಮನವರ್ ಅವರೂ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಮಾಡಿದರು.
ಈ ಯೋಜನೆಯನ್ನು ಸಾರ್ವಜನಿಕರೂ ಬಡವರು, ಕೂಲಿ ಕಾರ್ಮಿಕರು, ನಿರ್ಗತಿಕರು,ಶಾಲಾ ವಿದ್ಯಾರ್ಥಿಗಳು, ಪೌರಕಾರ್ಮಿಕರಿಗೆ ಮತ್ತು ಎಲ್ಲಾ ಜನರಿಗೂ ಕೂಡ ಅನುಕೂಲವಾಗಲಿದೆ.
ಹಾಗೂ ಹಾರೂಗೇರಿ ಪುರಸಭೆ ವತಿಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಮಾನ್ಯ ಶಾಸಕರು ಗ್ಯಾಸ್ ಸಿಲಿಂಡರ್ ವಿತರಣೆ ಮಾಡಿದರು.
ನಂತರ ಪುರಸಭೆಯ ಅಧಿಕಾರಿಗಳು ಹಾಗೂ ಉಪಾಧ್ಯಕ್ಷರು ಶಾಸಕರಿಗೆ ಸತ್ಕಾರ ಮಾಡಿದರು. ಇದೇ ಸಂದರ್ಭದಲ್ಲಿ ಪಟ್ಟಣದ ಪ್ರಮುಖರು,ಹಿರಿಯರು, ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು,ಸದಸ್ಯರು, ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ : ಭರತ ಮುರಗುಂಡೆ




