ಬೆಂಗಳೂರು: ವಾಲ್ಮೀಕಿ ಜಯಂತಿ ದಿನವಾದ ಇಂದು ಪರಿಶಿಷ್ಟ ವರ್ಗಗಳ ಸಚಿವಾಲಯಕ್ಕೆ ಚಾಲನೆ ಸಿಕ್ಕಿದ್ದು, ವಿಕಾಸಸೌಧದ 2ನೇ ಮಹಡಿಯ ಕೊಠಡಿ ಸಂಖ್ಯೆ -228 ರಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ನೂತನ ಪ್ರತ್ಯೇಕ ಸಚಿವಾಲಯದ ಕಚೇರಿಯನ್ನು ಪರಮ ಪೂಜ್ಯ ಶ್ರೀ ಪ್ರಸನ್ನಾನಂದ ಶ್ರೀಗಳು ಉದ್ಘಾಟಿಸಿದರು.
ಇಲ್ಲಿವರೆಗೂ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಇರಲಿಲ್ಲ, ಇದೀಗ ಪ್ರತ್ಯೇಕ ಸಚಿವಾಲಯ ರಚನೆ ಮಾಡಲಾಗಿದ್ದು, ಇದರಿಂದ ಪರಿಶಿಷ್ಟ ವರ್ಗಗಳ ಜನರ ಅಭಿವೃದ್ಧಿಗೆ ಅನುಕೂಲವಾಗಲಿದೆ. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಸಹಕಾರ ಸಚಿವ ಕೆ.ನ್. ರಾಜಣ್ಣ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ. ನಾಗೇಂದ್ರ ಉಪಸ್ಥಿತರಿದ್ದರು.
ವರದಿ: ಮಹಾಂತೇಶ ಎಸ್ ಹುಲಿಕಟ್ಟಿ