ರಾಮದುರ್ಗ: ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ವಿದ್ಯಾಚೇತನ ಶಾಲಾ ಅವರಣದಲ್ಲಿ ನೂತನವಾಗಿ ನಿರ್ಮಿಸಿದ ಗುರುಭವನ ಉದ್ಘಾಟನೆ ಕಾರ್ಯಕ್ರಮ ಜರುಗಿತು.
ಜ್ಯೋತಿ ಬೆಳಗುವುದರ ಮೂಲಕ ವಿಧಾನಸಭೆಯ ಮುಖ್ಯ ಸಚೇತಕ ರಾಮದುರ್ಗ ಶಾಸಕ ಅಶೋಕ ಪಟ್ಟಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ರಾಮದುರ್ಗ ಪಟ್ಟಣದಲ್ಲಿ 4 ಸಾವಿರ ಚ.ಅಡಿ ವಿಸ್ತೀರ್ಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ಬೃಹತ್ ಗುರುಭವನ ನಿರ್ಮಿಸಲಾಗಿದೆ. ಶಿಕ್ಷಕರ ಕಲ್ಯಾಣ ನಿಧಿಯಿಂದ 35 ಲಕ್ಷ ರೂ. ಉಳಿದ ಹಣವನ್ನು ತಾಲೂಕಿನ ಎಲ್ಲ ಶಿಕ್ಷಕರಿಂದ ವಂತಿಕೆ ಸಂಗ್ರಹಿಸಲಾಗಿದೆ. ಯಾವುದೇ ಸರಕಾರದ ಅನುದಾನ ಬಳಸದೇ ಕೇವಲ 8 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಶಿಕ್ಷಕರು, ನಿವೃತ್ತ ಶಿಕ್ಷಕರು ಹಾಗೂ ಶಿಕ್ಷಕರ ಕುಟುಂಬದವರು ನೀಡಿದ ದೇಣಿಗೆಯಿಂದ 19 ಲಕ್ಷ ರೂ. ವೆಚ್ಚದಲ್ಲಿ ಕಾರ್ಯಕ್ರಮಕ್ಕೆ ಅಗತ್ಯ ಇರುವ ಪರಿಕರ ಖರೀದಿಸಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಯಿತು
ವಿಧಾನಸಭೆಯ ಮುಖ್ಯ ಸಚೇತಕ ರಾಮದುರ್ಗ ಶಾಸಕ ಅಶೋಕ ಪಟ್ಟಣ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟಪುಸ್ತಕ ಹಾಗೂ ಸ್ಕೂಲ್ ಬ್ಯಾಗ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮತ್ತು ಎಸ್.ಎಸ್.ಎಲ್‌ಸಿ 2024ರ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಇಲಾಖೆ ಕೊಡಮಾಡುವ ಪ್ರೋತ್ಸಾಹದಾಯಕ ಲ್ಯಾಪ್ ಟ್ಯಾಪ್ ವಿತರಣಾ ಮಾಡಲಾಯಿತು. ಗುರುಭವನ ಸಮಿತಿ ಅಧ್ಯಕ್ಷ ರಾಮದುರ್ಗ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಟಿ. ಬಳಿಗಾರ ಸೇರಿ ಹಲವಾರು ಮಾತನಾಡಿದರು.
ಈ ಸಂಧರ್ಭದಲ್ಲಿ ಪುರಸಭೆ ಅಧ್ಯಕ್ಷೆ ಲಕ್ಷ್ಮೀ ಕಡಕೋಳ, ಉಪಾಧ್ಯಕ್ಷೆ ಸವಿತಾ ಧೂತ, ಶಿಕ್ಷಣ ಇಲಾಖೆ ಉಪನಿರ್ದೇಶಕಿ ಲಿಲಾವತಿ ಹಿರೇಮಠ, ಬಸವರಾಜ ನಲವತವಾಡ, ಎಸ್.ಬಿ. ಕೋಳಿ, ಮಹಮ್ಮದ್ ಸಬೂರ್, ಪುರಸಭೆ ಸದಸ್ಯ ನಾಗರಾಜ ಕಟ್ಟಿಮನಿ, ಗುರುಭವನ ಸಮಿತಿ ರಾಮದುರ್ಗ ಹಾಗೂ ಎಲ್ಲ ವೃಂದದ ಶಿಕ್ಷಕ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸರ್ವಸದಸ್ಯರು ತಾಲೂಕಾ ಘಟಕ ರಾಮದುರ್ಗ, ತಾಲೂಕಿನ ಎಲ್ಲ ಅನುಷ್ಠಾನಾಧಿಕಾರಿಗಳು ಮತ್ತು ಸಮಸ್ತ ಗುರುಬಳಗದವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಕಲಾದಗಿ




