
———————————————————————ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಗೌರವಪೂರ್ವಕವಾಗಿ ಸ್ವಾಗತಿಸಿದರು ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಸುಕ್ಷೇತ್ರ ಯಡೂರಿನ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಇಂದು ನಡೆಯಲಿರುವ ನೂತನ ರಾಜಗೋಪುರ ಉದ್ಘಾಟನೆ, ಕಳಸಾರೋಹಣ ಹಾಗೂ ಮಹಾಕುಂಭಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರನ್ನು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಲೋಕೋಪಯೋಗಿ ಇಲಾಖೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೌರವಪೂರ್ವಕವಾಗಿ ಸ್ವಾಗತಿಸಿದರು.
ರಾಜ್ಯಪಾಲರಾದ ಥಾವರಚಂದ್ ಗೆಹ್ಲೊಟ್, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮೇಯರ್ ಮಂಗೇಶ್ ಪವಾರ್, ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ., ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಉಪಸ್ಥಿತರಿದ್ದರು.




