ಸಿರುಗುಪ್ಪ : ನಗರದ ಕೃಷ್ಣ ನಗರದಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಪರಿಶಿಷ್ಟ ವರ್ಗ ಕಲ್ಯಾಣ ಇಲಾಖೆಯ ಕಛೇರಿ ಹಾಗೂ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡವನ್ನು ಶಾಸಕ ಬಿ.ಎಮ್.ನಾಗರಾಜ ಅವರು ಉದ್ಘಾಟಿಸಿದರು.
ನಂತರ ಮಾತನಾಡಿ ವಿದ್ಯಾರ್ಥಿಗಳು ಸರ್ಕಾರದ ಯೋಜನೆಯ ಉದ್ದೇಶಗಳನ್ನು ಸದುಪಯೋಗ ಪಡೆದುಕೊಳ್ಳಬೇಕು. ಅಧಿಕಾರಿಗಳು ಸಹ ಸಂಬಂದಪಟ್ಟ ವರ್ಗದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಸರ್ಕಾರದಿಂದ ದೊರೆಯುವ ಅಗತ್ಯ ಸೌಲಭ್ಯಗಳನ್ನು ನೀಡಬೇಕೆಂದರು.
ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ್ ಅವರು ದಿವಂಗತ ದೇವರಾಜು ಅರಸು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಇದೇ ವೇಳೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಧಿಕಾರಿ ಜಲಾಲಪ್ಪ.ಎ.ಕೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಲ್ಲಿಕಾರ್ಜುನ ಬಾರಿಮರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ.ಕೆ, ನಗರಸಭೆ ಸದಸ್ಯರಾದ ಬಿ.ಎಮ್.ಅಪ್ಪಾಜಿ ನಾಯಕ, ಹೆಚ್.ಗಣೇಶ, ಆರ್,ನಾಗರಾಜ, ತಾಲೂಕು ಮಟ್ಟದ ಅಧಿಕಾರಿಗಳಾದ ರಾಘವೇಂದ್ರವರ್ಮ, ಎ.ಗಾದಿಲಿಂಗಪ್ಪ, ಎಂ.ಸಿದ್ದಯ್ಯ ಹಾಗೂ ಸಿಬ್ಬಂದಿಗಳಿದ್ದರು.
ವರದಿ : ಶ್ರೀನಿವಾಸ ನಾಯ್ಕ