ವಿಜಯಪುರ : ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆನೇ ಮತ್ತು ಇತರ ಬೇಡಿಕೆಗಳು ಈಡೇರಿಸಬೇಕೆಂದು ಒತ್ತಾಯಿಸಿ ಡಿಸೆಂಬರ 31 ಮಂಗಳವಾರ ಬೆಳಗ್ಗೆ 6 ಗಂಟೆಗಳಿಂದ ರಾಜ್ಯದಾದಂತ” ಅನಿರ್ದಿಷ್ಟಾವಧಿ ಮುಷ್ಕರ ” ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಸಹಕರಿಸಿ ಬೆಂಬಲಿಸಬೇಕೆಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಜಿಲ್ಲಾಧ್ಯಕ್ಷರಾದ ಎಂ. ಎಚ್. ಅಗರಖೇಡ ಅವರು ತಿಳಿಸಿದ್ದಾರೆ.
ರಾಜ್ಯ ಸಾರಿಗೆ ನಿಗಮಗಳ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿಯನು ಉದ್ದೇಶಿಸಿ ಮಾತನಾಡಿದ ಅವರು, ಸುಮಾರು ಒಂದು ದಿನಕ್ಕೆ ಒಂದು ಕೋಟಿಗೂ ಹೆಚ್ಚಿನ ಪ್ರಯಾಣಿಕರನ್ನು ರಾಜ್ಯದ ಮೂಲೆ ಮೂಲೆಗಳಿಗೂ ತಲುಪಿಸುವ ಮೂಲಕ, ಹಾಗೂ ಶಕ್ತಿ ಯೋಜನೆಯ ಮೂಲಕ, ಸರ್ಕಾರಕ್ಕೆ ಒಳ್ಳೆಯ ಹೆಸರು ತಂದುಕೊಟ್ಟ ರಾಜ್ಯದ ನಾಲ್ಕು ನಿಗಮಗಳು ಒಂದು ಲಕ್ಷಕ್ಕೂ ಅಧಿಕ ನೌಕರರ ಬೇಡಿಕೆಗಳ ಬಗ್ಗೆ ಸರ್ಕಾರ ನಿರ್ಲಕ್ಷ ಧೋರಣೆ ತಳದಿದೆ ಎಂದರು.
ಸರ್ಕಾರಕ್ಕೆ ನಮ್ಮ ಸಂಘಟನೆಗಳ ಮೂಲಕ ಮನವಿಯನ್ನು ಸಲ್ಲಿಸಿದ್ದು ಸರ್ಕಾರವು ಮತ್ತು ಸಾರಿಗೆ ಮಂತ್ರಿಗಳು ಆ ಮನವಿಗಳಿಗೆ ಸ್ಪಂದಿಸದೆ ಇರುವುದರಿಂದ ನಮಗೆ ತೀವ್ರ ನಿರಾಶೆ ಉಂಟು ಮಾಡಿದ್ದಾರೆ.
ಅಗಸ್ಟ್ 13ರಂದು ಬೆಂಗಳೂರಿನಲ್ಲಿ ರಾಜ್ಯಮಟ್ಟದ ಸಮಾವೇಶ, ಆಗಸ್ಟ್ 27 ರಂದು ಕಲ್ಬುರ್ಗಿಯಲ್ಲಿ, ಮತ್ತು ಹುಬ್ಬಳ್ಳಿಯಲ್ಲಿ ಶಾಂತಿಯುತವಾಗಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು, ನಮ್ಮ ನಾಯಕ ಬೇಡಿಕೆಗಳನ್ನು ಇತ
ವರದಿ: ಸಾಯಬಣ್ಣ ಮಾದರ