Ad imageAd image

ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ..!

Bharath Vaibhav
ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಮುಷ್ಕರ..!
WhatsApp Group Join Now
Telegram Group Join Now

ಸಿಂಧನೂರು: – ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ. ತೀರ್ಮಾನದಂತೆ ಗ್ರಾಮ ಆಡಳಿತಾ ಧಿಕಾರಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕ ಘಟಕ ವತಿಯಿಂದ ತಹಸಿಲ್ದಾರರ ಕಚೇರಿ ಮುಂಭಾಗದಲ್ಲಿ ಸೆಪ್ಟಂಬರ್ 26ರಿಂದ ರಾಜ್ಯ ವ್ಯಾಪ್ತಿ ಅನಿರ್ದಿಷ್ಟ ಮುಷ್ಕರ ನಡೆಸಲಾಗುವುದು ಎಂದು ಗ್ರಾಮ ಆಡಳಿತ ಅಧಿಕಾರಿ ತಾಲೂಕ ಘಟಕ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ- ಮಾಳಿಂಗರಾಯ. ಜಿ. ಮಾಧ್ಯಮ ಪ್ರತಿ ನಿಧಿಗಳೊಂದಿಗೆ ಮಾತನಾಡಿ ನಮಗೆ ಕಚೇರಿಯಲ್ಲಿ ಕೆಲಸ ಮಾಡಲು ಹಲವಾರು ಮೂಲಭೂತ ಸಮಸ್ಯೆಗಳಿವೆ ಎಲ್ಲಾ ಮೊಬೈಲ್ ಆಪ್ ಗಳಲ್ಲಿ ಏಕಕಾಲದಲ್ಲಿ ಪ್ರಗತಿ ಸಾಧಿಸಲು ಒತ್ತಡ ಹೇರಲಾಗುತ್ತದೆ ಇದನ್ನು ಮಾಡಲು ಕಷ್ಟಕರವಾಗುತ್ತದೆ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಮಾರು 30 ವರ್ಷಗಳಿಂದ ಪದೋನ್ನತಿ ನೀಡುತ್ತಿಲ್ಲ.

ಇವೆಲ್ಲವೂ ನಮ್ಮ ನ್ಯಾಯ ಸಮ್ಮತವಾದ ಬೇಡಿಕೆಗಳಾಗಿವೇ
ಈ ಮೂಲ ಸೌಲಭ್ಯಗಳು ನಮಗೆ ಸಿಕ್ಕಲ್ಲಿ ನಾವು ಇನ್ನಷ್ಟು ಉತ್ತಮ ಮತ್ತು ಗುಣಮಟ್ಟದ ರೀತಿಯಲ್ಲಿ ಸಾರ್ವಜನಿಕರ ಮತ್ತು ಸರ್ಕಾರದ ಕೆಲಸ ಕಾರ್ಯಗಳು ನಿರ್ವಹಿಸಲು ಸಾಧ್ಯವಾಗುತ್ತದೆ ನಾವು ಕಳೆದ ಐದು ವರ್ಷಗಳಿಂದ ಆಡಳಿತ ಸರ್ಕಾರಗಳಿಗೆ ಮನವಿ ಮಾಡುತ್ತಿದ್ದೇವೇ ಆದರೆ ಇಲ್ಲಿವರೆಗೆ ಸೂಕ್ತ ಸ್ಪಂದನೆ ಸಿಕ್ಕಿಲ್ಲ.

ಈ ಕಾರಣಕ್ಕಾಗಿ ನಮ್ಮ ರಾಜ್ಯ ಘಟಕ ಪದಾಧಿಕಾರಿಗಳು ರಾಜ್ಯ ವ್ಯಾಪ್ತಿ ಮುಷ್ಕರಕ್ಕೆ ಕರೆ ನೀಡಿದ್ದು ಮಾನ್ಯ ಕಂದಾಯ ಸಚಿವರು ನಮ್ಮ ಬೇಡಿಕೆಗಳನ್ನು ಈಡೇರಿಕೆಗಾಗಿ ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿ ಪರಿಹರಿಸಬೇಕು ಇಲ್ಲವಾದಲ್ಲಿ ಎಲ್ಲಾ ಬಗೆಯ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಶನ್ ಹಾಗೂ ಲೇಖನಿ ಅನ್ನು ಸ್ಥಗಿತಗೊಳಿಸಿ ರಾಜ್ಯ ಘಟಕ ಮುಂದೆ ತೆಗೆದುಕೊಳ್ಳುವ ನಿರ್ಧಾರಗಳಿಗೆ ನಾವು ಬೆಂಬಲವಾಗಿ ನಿಂತು ಈ ಮುಷ್ಕರವನ್ನು ಮುಂದುವರಿಸುತ್ತೇವೆ ಎಂಬ ಅಂಶವನ್ನು ತಮ್ಮ ಅವಗಾಹನೆಗೆ ತರಬಯಸುತ್ತಾ ಸಮೂಹದ ಬೇಡಿಕೆಗಳನ್ನು ಈಡೇರಿಸಿ ಸಾರ್ವಜನಿಕ ಮತ್ತು ಸರ್ಕಾರಿ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡಬೇಕೆಂದು ಸಂಘವು ಆಗ್ರಹಿಸುತ್ತೇವೆ.!ಈ ಸಂದರ್ಭದಲ್ಲಿ – ಮಾಳಿಂಗರಾಯ.ಜಿ. ಬೀರೇಂದ್ರ.ಮೇಟಿ.. ವೀಣಾ.. ಆಲಂಬಾಷ.. ಲಿಂಗಪ್ಪ.. ಶ್ರೀನಿವಾಸ್. ಇನ್ನಿತರರು ಇದ್ದರು

ವರದಿ:-  ಬಸವರಾಜ ಬುಕ್ಕನಹಟ್ಟಿ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!