Ad imageAd image

ಎಸ್.ಬಿ.ಜಿ.ಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Bharath Vaibhav
ಎಸ್.ಬಿ.ಜಿ.ಯಲ್ಲಿ ಸ್ವಾತಂತ್ರ್ಯ ದಿನಾಚರಣೆ
WhatsApp Group Join Now
Telegram Group Join Now

ತುರುವೇಕೆರೆ: ಸಮಾಜದಲ್ಲಿ ನಾವು ಸವಾಲುಗಳನ್ನು ಎದುರಿಸುವಾಗ, ಸ್ವಾತಂತ್ರ್ಯಕ್ಕಾಗಿ ನಮ್ಮ ಹೋರಾಟವನ್ನು ವ್ಯಾಖ್ಯಾನಿಸಿದ ಏಕತೆಯಿಂದ ನಾವು ಸ್ಫೂರ್ತಿ ಪಡೆಯೋಣ ಎಂದು ತಾಲೂಕು ತೆಂಗು ಮತ್ತು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಎನ್.ಆರ್. ಜಯರಾಮ್ ತಿಳಿಸಿದರು.

ತಾಲೂಕಿನ ಎಸ್.ಬಿ.ಜಿ. ಶಾಲಾಕಾಲೇಜು ವತಿಯಿಂದ ಆಯೋಜಿಸಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ‌ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮ್ಮ ದೇಶದ ವೈವಿಧ್ಯತೆಯೇ ನಮ್ಮ ಶಕ್ತಿಯಾಗಿದೆ ಮತ್ತು ಅದನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬದುಕಿನ ದಾರಿಯಲ್ಲಿ ಬರುವ ಯಾವುದೇ ಅಡೆತಡೆಗಳನ್ನು ನಾವು ಜಯಿಸಬಹುದಾಗಿದೆ ಎಂದರು.

ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಹೋರಾಟ ನಡೆಸಿ ವೀರ ಮರಣವನ್ನಪ್ಪಿದ ಮಹನೀಯರ ಬದುಕು ನಮಗೆ ಆದರ್ಶವಾಗಬೇಕಿದೆ. ತ್ಯಾಗ ಬಲಿದಾನಗಳಿಂದ ಪಡೆದ ಸ್ವಾತಂತ್ರ್ಯದ ರಕ್ಷಣೆ ನಮ್ಮೆಲ್ಲರ ಗುರಿಯಾಗಬೇಕಿದೆ ಎಂದ ಅವರು, ಭಾರತದಲ್ಲಿ ಯುವಶಕ್ತಿ ಹೆಚ್ಚಿದ್ದು, ಯುವಕರು ದೇಶಪ್ರೇಮವನ್ನು ಬೆಳೆಸಿಕೊಂಡು ಸದೃಢ ದೇಶ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಬೇಕೆಂದರು.

ನಿವೃತ್ತ ಯೋಧರನ್ನು ಸನ್ಮಾನಿಸಲಾಯಿತು. ಬ್ರಹ್ಮಚಾರಿ ರಾಜಶೇಖರನಾಥ್ ಜೀ ಉಪನ್ಯಾಸ ನೀಡಿದರು. ಮುಖ್ಯ ಶಿಕ್ಷಕ ಗಿರೀಶ್, ರಾಜಶೇಖರ್, ಚಂದ್ರಶೇಖರ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿ: ಗಿರೀಶ್ ಕೆ ಭಟ್

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!