Ad imageAd image

ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಇಂದು

Bharath Vaibhav
ಭಾರತ- ಇಂಗ್ಲೆಂಡ್ ನಾಲ್ಕನೇ ಟೆಸ್ಟ್ ಇಂದು
WhatsApp Group Join Now
Telegram Group Join Now

—————–ಸಾಯಿ ಸುದರ್ಶನ್

ಮ್ಯಾಂಚೇಸ್ಟರ್ ( ಇಂಗ್ಲೆಂಡ್): ಪ್ರವಾಸಿ ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವಿನ ನಾಲ್ಕನೇ ಕ್ರಿಕೆಟ್ ಟೆಸ್ಟ್ ಪಂದ್ಯಇಂದು ಇಲ್ಲಿನ ಓಲ್ ಟ್ರೆಪೆಡ್ ಮೈದಾನದಲ್ಲಿ ನಡೆಯಲಿದೆ.

ಐದು ಟೆಸ್ಟ್ ಪಂದ್ಯಗಳ ಈ ಸರಣಿಯಲ್ಲಿ ಇಂಗ್ಲೆಂಡ್ 2-1 ರಿಂದ ಮುನ್ನಡೆ ಸಾಧಿಸಿದೆ. ಕಳೆದ 30 ವರ್ಷಗಳಲ್ಲಿ ಈ ಮೈದಾನದಲ್ಲಿ ಇದಕ್ಕೆ ಮುನ್ನ ಕೇವಲ ಒಂದು ಟೆಸ್ಟ್ ಪಂದ್ಯವನ್ನು ಮಾತ್ರ ಆಡಿದ್ದು, ಸಚಿನ್ ತೆಂಡೂಲ್ಕರ್ ಗಳಿಸಿದ ಶತಕವೇ ಆಟಗಾರನೋರ್ವನ  ಅತ್ಯಧಿಕ ಮೊತ್ತವಾಗಿದೆ.

ಹವಾಮಾನ ಮುನ್ಸೂಚನೆ ಪ್ರಕಾರ ಆಗಾಗ ಸಣ್ಣದಾಗಿ ಮಳೆ ಬರುವ ನಿರೀಕ್ಷೆ ಇದ್ದು, ಆಗಾಗ ವರುಣ ಆಟಕ್ಕೆ ಅಡ್ಡಿ ಉಂಟು ಮಾಡುವ ಸಂಭವ ಇದೆ. ಇನ್ನು ಈ ಪಂದ್ಯಕ್ಕೆ ಭಾರತ ತಂಡದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದ್ದು, ಗಾಯಗೊಂಡಿರುವ ನಿತೀಶ್ ಕುಮಾರ್ ರೆಡ್ಡಿ ಬದಲಿಗೆ ಸಾಯಿ ಸುದರ್ಶನ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಬೌಲಿಂಗ್ ವಿಭಾಗದಲ್ಲೂ ಒಂದು ಬದಲಾವಣೆಯ ಸಾಧ್ಯತೆ ಇದೆ. ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಆರಂಭವಾಗಲಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!