ನವದೆಹಲಿ: 2060ರಲ್ಲಿ ಭಾರರ ವಿಶ್ವದ ಅತೀ ದೊಡ್ಡ ಆರ್ಥಿಕ ವ್ಯವಸ್ಥೆ ಆಗುವುದಿಲ್ಲ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆ ನೀಡಿದ್ದು, ಇದಕ್ಕೆ ಭಾರೀ ಟೀಕೆ ವ್ಯಕ್ತವಾಗುತ್ತಿದೆ.
2060ಕ್ಕೆ ಭಾರತ ವಿಶ್ವದ ಅಗ್ರ ಆರ್ಥಿಕತೆಯಾಗಲಿದೆ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ಬಳಿಕ ಇಡೀ ವಿಶ್ವದಲ್ಲಿ ಪ್ರಕ್ಷುಬ್ದತೆ ಉಂಟಾಗಿದೆ.
ಇಂತಹ ಪರಿಸ್ಥಿತಿಯಲ್ಲಿ ಭಾರತ ಈ ಸಾಧನೆ ಮಾಡುವುದು ಕಷ್ಟ. 2060ಕ್ಕೆ ಭಾರತ ವಿಶ್ವದ ಅತಿ ದೊಡ್ಡ ಆರ್ಥಿಕ ವ್ಯವಸ್ಥೆಯಾಗಲಿದೆ ಎಂಬುದನ್ನು ನಾನು ಒಪ್ಪುವುದಿಲ್ಲ ಎಂದಿದ್ದಾರೆ.
ಮಮತಾ ಬ್ಯಾನರ್ಜಿಯವರ ಈ ಹೇಳಿಕೆಗೆ ಬಿಜೆಪಿಯಿಂದ ಭಾರೀ ಟೀಕೆ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕ ಅಮಿತ್ ಮಾಳವಿಯಾ ಅವರು ಈ ಬಗ್ಗೆ ಮಾತನಾಡಿ, ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರೀತಿಯಲ್ಲೇ ವಿದೇಶದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿ ತಮ್ಮದೇ ದೇಶಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.