ಅಮೆರಿಕ: “ಪರಮಾಣು ಸಶಸ್ತ್ರಗಳನ್ನು ಹೊಂದಿರುವ ಭಾರತ ಮತ್ತು ಪಾಕಿಸ್ತಾನ ದೇಶಗಳು ಈ ಸಂದರ್ಭದಲ್ಲಿ ಗರಿಷ್ಠ ಸಂಯಮ ಕಾಯ್ದುಕೊಳ್ಳಬೇಕು ಮತ್ತು ಯುದ್ಧದ ಅಂಚಿನಿಂದ ಹಿಂದೆ ಸರಿಯಬೇಕು” ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಒತ್ತಾಯಿಸಿದ್ದಾರೆ.
ಏಪ್ರಿಲ್ 22ರಂದು 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿರುವ ಅವರು, “ಎರಡೂ ದೇಶಗಳ ನಡುವಿನ ಸಂಬಂಧ ಸಾಕಷ್ಟು ಹದಗೆಟ್ಟಿದೆ. ವಿಶ್ವಾಸಾರ್ಹ ಮತ್ತು ಕಾನೂನುಬದ್ಧ ವಿಧಾನಗಳ ಮೂಲಕ ಘಟನೆಗೆ ಕಾರಣರಾದವರನ್ನು ಕಟಕಟೆಗೆ ತಂದು ನಿಲ್ಲಿಸಬೇಕು. ಉದ್ವಿಗ್ನತೆಯ ಈ ಸಂದರ್ಭದಲ್ಲಿ ಉಭಯ ದೇಶಗಳ ಸೇನೆಗಳು ಮುಖಾಮುಖಿ ಆಗುವುದನ್ನು ತಪ್ಪಿಸುವುದು ಅತ್ಯಗತ್ಯ” ಎಂದು ಹೇಳಿದ್ದಾರೆ.




