ನವದೆಹಲಿ: ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದ. ಕೂಡಲೇ ಪಾಕ್ ಆಕ್ರಮಿತ ಕಾಶ್ಮೀರವನ್ನು ತೆರವುಗೊಳಿಸಲೇಬೇಕು ಎಂದು ಹೇಳಿದೆ.
ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಗಳಲ್ಲಿ ಹೊಂದಾಣಿಕೆಯನ್ನು ಹೆಚ್ಚಿಸುವ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಮಾತನಾಡುವಾಗ ಈ ಹೇಳಿಕೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರವು ಹಿಂದೆ, ಇಂದು ಮತ್ತು ನಾಳ ಎಂದೆಂದಿಗೂ ಭಾರತದ ಅವಿಭಾಜ್ಯ ಅಂಗವಾಗಿರುತ್ತದೆ. ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿದೆ, ಅದನ್ನು
ತೆರವುಗೊಳಿಸಲೇಬೇಕು ಎಂದು ಹರೀಶ್ ಹೇಳಿದ್ದಾರೆ.
ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯ ಸಂದರ್ಭದಲ್ಲಿ ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ವಿಷಯವನ್ನು ಕೆಣಕಿದ ನಂತರ ಹರೀಶ್ ಅವರ ಬಲವಾದ ಪ್ರತಿಕ್ರಿಯೆ ಬಂದಿದೆ. ಪಾಕಿಸ್ತಾನದ ಪ್ರತಿನಿಧಿಯು ಭಾರತದ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೇಲೆ ಅನಗತ್ಯ ಹೇಳಿಕೆಗಳನ್ನು ನೀಡಿರುವುದನ್ನು ಭಾರತ ಗಮನಿಸಬೇಕಾಗಿದೆ ಎಂದು ಹರೀಶ್ ಹೇಳಿದ್ದಾರೆ.