ಎಜಬಾಸ್ಟನ್ (ಬರ್ಮಿಂಗ್ ಹ್ಯಾಂ): ಭಾರತ ಹಾಗೂ ಇಂಗ್ಲೆಂಡ್ ಕ್ರಿಕೆಟ್ ತಂಡಗಳ ನಡುವೆ ದ್ವಿತೀಯ ಟೆಸ್ಟ್ ಪಂದ್ಯ ಇಲ್ಲಿ ಆರಂಭವಾಗಿದ್ದು, ಮೊದಲು ಬ್ಯಾಟ್ ಮಾಡಲು ಆರಂಭಿಸಿದ ಭಾರತ ವಿಕೆಟ್ ನಷ್ಟವಿಲ್ಲದೇ 9 ರನ್ ಗಳಿಸಿತ್ತು.

ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಜಸ್ಪ್ರಿತ ಬೂಮ್ರಾ ಅವರು ಅಲಭ್ಯರಾಗಿರುವ ಕಾರಣ ಅವರ ಜಾಗದಲ್ಲಿ ಆಕಾಶ ದೀಪ್ ಅವರನ್ನು ಆಡಿಸಲು ನಿರ್ಧರಿಸಲಾಯಿತು. ಮೊದಲ ಟೆಸ್ಟ್ ಪಂದ್ಯದಲ್ಲಿ ಪರಿಣಾಮಕಾರಿಯಾಗಲು ವಿಫಲರಾಗಿದ್ದ ಕರುಣ್ ನಯ್ಯರ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸಲು ನಿರ್ಧರಿಸಲಾಗಿದೆ.




