ಗುರುಮಠಕಲ್: ಕರ್ನಾಟಕ ಕಾರ್ಯನಿರತರ ಪತ್ರಕರ್ತರ ಧ್ವನಿ ಸಂಘಟನೆಯ ಯಾದಗಿರಿ ಜಿಲ್ಲಾ ಘಟಕಕ್ಕೆ ನೂತನ ಜಿಲ್ಲಾಧ್ಯಕ್ಷರಾಗಿ ಇಂದುದರ್ ಸಿನ್ನೂರು ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಸಂಘಟನೆಯ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ಬಂಗ್ಲೆ ಅವರು ಆದೇಶ ಪತ್ರವನ್ನು ಹೊರಡಿಸಿದ್ದಾರೆ. ಕ್ರಾಂತಿ ದಿನ ಪತ್ರಿಕೆಯ ಸಂಪಾದಕರಾಗಿರುವ ಇಂದುದರ್ ಸಿಂನ್ನೂರು ಅವರು ಪತ್ರಿಕಾ ಕ್ಷೇತ್ರದಲ್ಲಿ ತಮ್ಮ ಸೇವೆ ಮತ್ತು ನಿಷ್ಠೆಯನ್ನು ಗುರುತಿಸಿ. ಅವರ ಅನುಭವ ಮತ್ತು ನಾಯಕತ್ವದ ಮೇಲೆ ವಿಶ್ವಾಸ ವ್ಯಕ್ತಪಡಿಸಿ ಸಂಘಟನೆಯಿಂದ ಈ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿಸಲಾಗಿದೆ.
ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಇಂದುದರ್ ಸಿನ್ನೂರು ಅವರು, ಪತ್ರಕರ್ತರ ಹಕ್ಕುಗಳ ರಕ್ಷಣೆಯೊಂದಿಗೆ ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಕಾರ್ಯನಿರತರ ಪತ್ರಕರ್ತರನ್ನು ಒಗ್ಗೂಡಿಸಿ, ಅವರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದ್ದಾರೆ. ಈ ನೇಮಕಾತಿಗೆ ಸಂಬಂಧಿಸಿದಂತೆ ಗುರುಮಠಕಲ್ ಪತ್ರಕರ್ತರ ಸಂಘದ ಅಧ್ಯಕ್ಷ ರವಿ ಬುರನೋಳ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಇಂದುದರ್ ಸಿನ್ನೂರು ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿ, ಅವರ ನಾಯಕತ್ವದಲ್ಲಿ ಸಂಘಟನೆ ಇನ್ನಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದ್ದಾರೆ.
ವರದಿ : ರವಿ ಬುರನೋಳ್




