ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯ ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಸ್ವಯಂಘೋಷಣೆ ಮಾಡಿಕೊಳ್ಳಲು ಆನ್ಲೈನ್ ಅವಕಾಶ ಕಲ್ಪಿಸಲಾಗಿದೆ.
ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್ನೈನ್ ಲಿಂಕ್ ಕ್ಲಿಕ್ ಮಾಡಿ ಮಾಹಿತಿಯನ್ನು ಅಪ್ಲೋಡ್ ಮಾಡಬಹುದಾಗಿದೆ. ಈ ಕೆಳಗಿನ ಲಿಂಕ್ ಉಪಯೋಗಿಸಿ ಜನರು ಮಾಹಿತಿ ಸಲ್ಲಿಸಲು ಅವಕಾಶ ನೀಡಲಾಗಿದೆ.
https://schedulecastesurvey, karnataka.gov.in/selfc
ಮೇ 19 ರಿಂದ ಮೇ 28 ರವರೆಗೆ ಸ್ವಯಂಘೋಷಣೆ ಮಾಡಿಕೊಳ್ಳಲು ಕಲ್ಪಿಸಲಾಗಿದೆ. ಆನ್ನೈನ್ನಲ್ಲಿ ಸ್ವಯಂಘೋಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಯೂಟ್ಯೂಬ್ ಲಿಂಕ್ ಸಹ ನೀಡಲಾಗಿದೆ.
ಪ್ರಕ್ರಿಯೆಯ ವಿಡಿಯೋ ಇದ್ದು ಸಾರ್ವಜನಿಕರಿಗೆ ಸಂಪುರ್ಣ ಮಾಹಿತಿ ಸಿಗಲಿದೆ.ಇದನ್ನು ಸದುಪಯೋಗ ಪಡಿಸಿಕೊಳ್ಳಿ ಎಂದು ಸಮಾಜ ಕಲ್ಯಾಣ ಇಲಾಖೆ ಮನವಿ ಮಾಡಿದೆ.