ಹುಮನಾಬಾದ :ಸುವ್ಯವಸ್ಥಿತ ಚರಂಡಿ ನಿರ್ಮಾಣ ಕಾಮಗಾರಿ ಕೈಗೊಳ್ಳದ ಕಾರಣ ಹಳ್ಳಿಖೇಡ (ಬಿ) ಪಟ್ಟಣದ ವಾರ್ಡ್ 3ರಲ್ಲಿ ಕೊಳಚೆ ಸಂಗ್ರಹವಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹಳ್ಳಿಖೇಡ (ಬಿ) ಪಟ್ಟಣದ 3ನೇ ವಾರ್ಡ್ ನಿವಾಸಿಗಳು ಆರೋಪಿಸಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ವಾರ್ಡ್ ನಲ್ಲಿ ಸುವ್ಯವಸ್ಥಿತ ಚರಂಡಿ ನಿರ್ಮಾಣ ಮಾಡುವಂತೆ ಪುರಸಭೆ ಅಧಿಕಾರಿಗಳಿಗೆ ಹಾಗೂ ಚುನಾಯಿತ ಜನ ಪ್ರತಿನಿಧಿಗಳಿಗೆ ಈ ಹಿಂದೆ ಸಾಕಷ್ಟು ಬಾರಿ ಮನವಿ ಮಾಡಲಾಗಿತ್ತು.ಆದರೆ ನಮ್ಮ ಮನವಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಅಧಿಕಾರಿಗಳು ಕಾಲ ಹರಣ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪುರಸಭೆ ಸದಸ್ಯ ರೇವಪ್ಪ ವೋಲದೊಡ್ಡಿ ಮಾತನಾಡಿ,ಚರಂಡಿ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡು ಹಲವು ದಿನಗಳೇ ಕಳೆದು ಹೋದರು ಕೂಡಾ ಕಾಮಗಾರಿ ಮಾತ್ರ ಚಾಲನೆಯಾಗಿಲ್ಲ.
ಜನರ ಆರೋಗ್ಯ ಹಿತದೃಷ್ಟಿಯಿಂದ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡು ಶೀಘ್ರದಲ್ಲೇ ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಒತ್ತಾಯಿಸಿದರು.
ವರದಿ:ಸಜೀಶ ಲಂಬುನೋರ್