ಸೇಡಂ : ತಾಲೂಕಿನ ಸಿಲಾರಕೊಟ್ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹರಿಜನವಾಡ ಶಾಲೆಗಳಲ್ಲಿ ಸ್ವಚ್ಛತೆ ಮತ್ತು ಬಿಸಿಯೂಟ, ಆಟದ ಮೈದಾನ ಕುರಿತು ಇನ್ನಿತರ ಅನೇಕ ಸಮಸ್ಯೆಗಳ ಬಗ್ಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತರ ಸೇನೆ ಮುಧೋಳ್ ವಲಯ ಅಧ್ಯಕ್ಷರಾದ ಸಾಬಪ್ಪ ಆಬ್ಬಾಗಳ ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಬಿ,ಅರ್,ಪಿ ಮತ್ತು ಸಿ,ಆರ್,ಪಿ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ಬೇಟಿ ನೀಡಿ ಸ್ವಚ್ಛತೆ ಬಗ್ಗೆ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಶಾಲೆಯ ಹಿಂಬಾಗದಲ್ಲಿ ಸರಕಾರಿ ಸ್ಥಳವಾಗಿದ್ದು ಅದನ್ನು ಮಕ್ಕಳಿಗೆ ಆಟದ ಮೈದಾನ ಮಾಡಿಕೊಡಬೇಕು ಎಂದು ಮತ್ತೊಮ್ಮೆ ಮನವಿ ಮಾಡಲಾಯಿತು.
ಈ ಎಲ್ಲಾ ಸಮಸ್ಯೆಗಳನ್ನು ಒಂದು ವಾರದಲ್ಲಿ ಬಗೆಹರಿಸದಿದ್ದರೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತರ ಸೇನೆ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಸಬಾಪ್ಪ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್ಡಿಎಂಸಿ ಉಪಾಧ್ಯಕ್ಷರಾದ ನರೇಶ್ ಪಂದುಲ್, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರೈತರ ಸೇನೆ ಮುಧೋಳ್ ವಲಯ ಅಧ್ಯಕ್ಷರಾದ ಸಬಪ್ಪ ಅಬ್ಬಗಳ, ಸಿ,ಆರ್,ಪಿ ಸಾಯಿಬಣ್ಣ ಪೂಜಾರಿ, ಗ್ರಾಮ ಪಂಚಾಯತ್ ಅಧಿಕಾರಿಗಳಾದ ರಾಮಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ವರದಿ : ವೆಂಕಟಪ್ಪ ಕೆ ಸುಗ್ಗಾಲ್