ಬೆಂಗಳೂರು : ನಂದಿನಿಯೇತರ ಎಲ್ಲಾ ಬ್ರ್ಯಾಂಡ್ ಗಳ ತುಪ್ಪದ ತಪಾಸಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಂದಿನಿ ಬ್ರ್ಯಾಂಡ್ ಹೊರತುಪಡಿಸಿ ಎಲ್ಲ ಸಂಸ್ಥೆಗಳ ತುಪ್ಪದ ಮಾದರಿಗಳನ್ನು ಸಂಗ್ರಹಿಸಿ ತಪಾಸಣೆಗೆ ಒಳಪಡಿಸುವಂತೆ ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಮಾರಾಟ ಆಗುತ್ತಿರುವ ನಂದಿನಿ ತುಪ್ಪವನ್ನು ಬಿಟ್ಟು, ಇತರ ಎಲ್ಲ ತುಪ್ಪಗಳ ಮಾದರಿ ಸಂಗ್ರಹಿಸಿ, ಪರಿಶೀಲಿಸಿ ಗುಣಮಟ್ಟ ಕಾಪಾಡಲು ಸೂಚಿಸಲಾಗಿದೆ. ದೇವಸ್ಥಾನಗಳಲ್ಲಿ ಕೊಡುವ ಪ್ರಸಾದಗಳ ಮಾದರಿ ಪರೀಕ್ಷಿಸುವ ಬದಲು, ಬಳಸುವ ತುಪ್ಪದ ಪರಿಶೀಲನೆ ಕೈಗೊಳ್ಳುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.