ಬೆಳಗಾವಿ: ದೆಹಲಿಯಲ್ಲಿ ಕಾರ್ ಬಾಂಬ್ ಸ್ಫೋಟ ಪ್ರಕರಣದ ಬೆನ್ನಲ್ಲೇ ಕೇಂದ್ರ ಗುಪ್ತಚರ ಇಲಾಖೆ ಬೆಳಗಾವಿಯಲ್ಲಿಯೂ ಕಟ್ಟೆಚ್ಚರ ವಹಿಸಲು ಸೂಚನೆ ನೀಡಿದೆ.ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನದ ವೇಳೆ ಪೊಲೀಸರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಗುಪ್ತಚರ ಇಲಾಖೆ ಕಟ್ಟೆಚ್ಚರಕ್ಕೆ ಸೂಚಿಸಿದೆ.
ಗುಪ್ತಚರ ಇಲಾಖೆ ಸೂಚನೆ ಬೆನ್ನಲ್ಲೇ ಬೆಳಗಾವಿಯಲ್ಲಿ ಹೈಲರ್ಟ್ ಘೋಷಿಸಲಾಗಿದೆ. ಬೆಳಗಾವಿ ನಗರದಲ್ಲಿ ಹೆಚ್ಚುವರಿಯಾಗಿ 6000 ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಸುವರ್ಣ ವಿಧಾನಸೌಧದ ಸುತ್ತ ಕಟ್ಟೆಚ್ಚರವಹಿಸಲಾಗಿದೆ. ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ನೇತೃತ್ವದಲ್ಲಿ ಆರು ಎಸ್ ಪಿ ರ್ಯಾಂಕ್ ಮಟ್ಟದ ಪೊಲೀಸ್ ಅಧಿಕಾರಿಗಳು, 146 ಹಿರಿಯ ಪೊಲೀಸ್ ಅಧಿಕಾರಿಗಳು, 3820 ಪೊಲೀಸ್ ಸಿಬ್ಬಂದಿಗಳು, 500ಮ್ ಗಾರ್ಡ್ ಗಳು, 8 ಕ್ಷಿಪ್ರ ಕಾರ್ಯಪಡೆ, 10ಡಿಎ ಆರ್ ತುಕಡಿ, 35ಕೆ.ಎಸ್.ಆರ್.ಪಿ ತುಕಡಿ, 1 ಬಿಡಿಡಿಎಸ್ ತಂಡ, 1 ಗರುಡಾ ಪೊಲೀಸ್, 16 ವಿಧ್ವಂಸಕ ಕೃತ್ಯ ತಪಾಸಣೆ ತಂಡ ನಿಯೋಜಿಸಲಾಗಿದ್ದು, ಸುವರ್ಣಸೌಧದ ಸುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.




