ಬೆಂಗಳೂರು : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ಜೂನ್ 21 ರಂದು ‘ಅಂತರರಾಷ್ಟ್ರೀಯ ಯೋಗ ದಿನ ಆಚರಣೆ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.
ವಿಶ್ವಸಂಸ್ಥೆಯು ಜೂನ್ 21 ನ್ನು ‘ಅಂತರರಾಷ್ಟ್ರೀಯ ಯೋಗ ದಿನ ವನ್ನಾಗಿ ಘೋಷಿಸಿದೆ. ಯೋಗ ಭಾರತದ ಪ್ರಾಚೀನ ಸಂಪ್ರದಾಯದ ಒಂದು ಆತ್ಮಮೂ ಕೊಡುಗೆಯಾಗಿದೆ.
ಇದು ಮನಸ್ಸು ಮತ್ತು ದೇಹದ ಐತೆಯನ್ನು ಸಾಕಾರಗೊಳಿಸಿದೆ. ಯೋಗವು ನಮ್ಮ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳಲೇಬೇಕಾದ ಉತ್ತಮ ಜೀವನ ನಿರ್ವಹಣೆಯ ಒಂದು ವಿಜ್ಞಾನವಾಗಿದೆ. ಇದು ಒಬ್ಬ ಮಮಷ್ಯನ ಪಾರೀರಿಕರವಾದ, ಬೇತವಾತ್ಮಕವಾದ ಭೌದ್ಧಿಕವಾದ ಭಾವನಾತ್ಮಕವಾದ, ಮಾನಸಿಕ ಮತ್ತು ಅಧ್ಯಾತ್ಮಿಕವಾದ ಎಲ್ಲಾ ಸ್ವರಗಳಲ್ಲಿಯೂ ಕೆಲಸ ಮಾಡುತ್ತದೆ. ಇದು ಇಂದಿನ ಮತ್ತು ಭವಿಷ್ಯದ ಅಗತ್ಯವೂ ಆಗಿದೆ.
ಯೋಗಾಭ್ಯಾಸ ಮಾಡುವುದರಿಂದ ಭಾವನಾತ್ಮಕ, ಮಾನಸಿಕ ಮತ್ತು ಶಾರೀರಿಕ ಹಂತಗಳ ಅಂತರಿಕ ಸಂಬಂಧಗಳ ಬಗ್ಗೆ ಮತ್ತು ಇವುಗಳಲ್ಲಿ ಯಾವುದಾದರೊಂದು ಅವ್ಯವಸ್ಥಿತವಾದರೆ, ಇನ್ನಿತರ ಹಂತಗಳ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬ ತಿಳುವಳಿಕೆಯು ಮೂಡುತ್ತದೆ.




