ಭಾರತೀಯ ಷೇರುಮಾರುಕಟ್ಟೆ ಬುಧವಾರವೂ ಅಲ್ಪ ಪ್ರಮಾಣದ ಚೇತೋಹಾರಿ ವಹಿವಾಟು ನಡೆಸಿದ್ದು,, ಷೇರುಮಾರುಕಟ್ಟೆಯ ಉಭಯ ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಏರಿಕೆಯಲ್ಲಿ ದಿನದ ವಹಿವಾಟು ಅಂತ್ಯಗೊಳಿಸಿವೆ.
ಇಂದಿನ ವಹಿವಾಟಿನಲ್ಲಿ ಭಾರತೀಯ ಷೇರುಮಾರುಕಟ್ಟೆ
ಸೂಚ್ಯಂಕಗಳಾದ ಸೆನ್ಸೆಕ್ಸ್ ಮತ್ತು ನಿಫ್ಟಿ ಶೇ.0.14 ರಿಂದ ಶೇ.0.042ರಷ್ಟು
ಏರಿಕೆ ಕಂಡಿದ್ದು, ಸೆನ್ಸೆಕ್ಸ್ 110.58 ಅಂಕಗಳ ಏರಿಕೆಯೊಂದಿಗೆ 80,956.33 ಅಂಕಗಳಿಗೆ ಏರಿಕೆಯಾಗಿದೆ.
ಅಂತೆಯೇ ನಿಫ್ಟಿ ಕೂಡ 10.30 ಅಂಕಗಳ ಅಲ್ಪ ಏರಿಕೆಯೊಂದಿಗೆ 24,467.45 ಅಂಕಗಳಿಗೆ ಏರಿಕೆಯಾಗಿ ದಿನದ ವಹಿವಾಟು
ಅಂತ್ಯಗೊಳಿಸಿದ.