Ad imageAd image

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಸಲು ಅರ್ಜಿ ಆಹ್ವಾನ

Bharath Vaibhav
ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಸಲು ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2025-26ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆ, ಹೊಲಿಗೆ ಯಂತ್ರ ವಿತರಣೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ನಲ್ಲಿ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಸಮುದಾಯಗಳ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಲ್ಲ. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

 

ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://dbcdo.karnataka.gov.in ರಲ್ಲಿ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ನ್ನು ಸಂಪರ್ಕಿಸುವುದು.

ಸ್ವಾವಲಂಬಿ ಸಾರಥಿ ಯೋಜನೆ

ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.

ಯೋಜನೆಗೆ ಸಬ್ಸಿಡಿ ಪಡೆಯಲು ಅರ್ಹತೆಗಳು

ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.

ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು,.

ಡ್ರೈವಿಂಗ್ ಲೈಸೆನ್ಸ್

ಕುಟುಂಬದ ಯಾವುದೇ ಸದಸ್ಯನೋ ಸರ್ಕಾರಿ ಉದ್ಯೋಗಿಯಾಗಿರಬಾರದು.

ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಪರಿಶಿಷ್ಟ ಪಂಗಡದವರಾಗಿರಬೇಕು.

ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಬ್ಯಾಂಕ್ ಪಾಸ್ ಬುಕ್

ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ

(DL) ಡ್ರೈವಿಂಗ್ ಲೈಸೆನ್ಸ್

ಫೋಟೋ

ಮೊಬೈಲ್ ನಂಬರ್

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅಜರ್ಿ ಸಲ್ಲಿಸಲು ಅರ್ಹರಿರುವುದಿಲ್ಲ.

WhatsApp Group Join Now
Telegram Group Join Now
Share This Article
error: Content is protected !!