Ad imageAd image

ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

Bharath Vaibhav
ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ
WhatsApp Group Join Now
Telegram Group Join Now

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮಗಳಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ, ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ, ಹೀಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ.

ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ನಿಗಮದ ವೆಬ್‍ಸೈಟ್ ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮ www.kaad.karnataka.gov.in, ಸವಿತಾ ಸಮಾಜ ಅಭಿವೃದ್ಧಿ ನಿಗಮ www.kssd.karnataka.gov.in, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ www.dbcdc.karnataka.gov.in, ಕರ್ನಾಟಕ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ https://kvldcl.karnataka.gov.in, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮ www.kmmd.karnataka.gov.in ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.

ನಿಗಮದ ಸಹಾಯವಾಣಿ ಸಂಖ್ಯೆ:080-22374832 ಮತ್ತು 8050770004 ಅಥವಾ 8050770005 ಸಂಪರ್ಕಿಸಬಹುದು. ಸೇವಾಸಿಂಧು ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಜೂನ್ 30 ಕೊನೆ ದಿನವಾಗಿದೆ.

ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಸಂಪರ್ಕಿಸಬಹುದು ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
Share This Article
error: Content is protected !!