ಐಪಿಎಲ್ನ 60ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ ಗೆಲುವು ಸಾಧಿಸುತ್ತಿದ್ದಂತೆ 3 ತಂಡಗಳು ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿವೆ. ಭಾನುವಾರ ಸಂಜೆ ನಡೆದಿದ್ದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿ ಆಗಿದ್ದವು. ಈ ನಿರ್ಣಾಯಕ ಪಂದ್ಯದಲ್ಲಿ ಗುಜರಾತ್ ಪಡೆ 10 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿ ಪ್ಲೇಆಫ್‌ಗೆ ಎಂಟ್ರಿ ಕೊಟ್ಟಿದೆ.
ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದಿದ್ದ ರೋಚಕ ಪಂದ್ಯದಲ್ಲಿ, ಡಲ್ಲಿ ಕ್ಯಾಪಿಟಲ್ಸ್ ನೀಡದ್ದ 199 ರನ್ಗಳ ಗರಿಯನ್ನು ಬೆನ್ನಟ್ಟಿದ ಗುಜರಾತ್ ಪರ ಆರಂಭಿಕ ಬ್ಯಾಟರ್, ಸಾಯಿ ಸುದರ್ಶನ್ ಮತ್ತು ನಾಯಕ ಶುಭ್ಮನ್ ಗಿಲ್ 201 ರನ್ಗಳ ಜೊತೆಯಾಟವಾಡಿ ಯಾವುದೇ ವಿಕೆಟ್ ನಷ್ಟವಿಲ್ಲದೇ ತಂಡವನ್ನು ಗೆಲುವಿನ ದಡಕ್ಕೆ ಸೇರಿಸಿದರು.
ಸಾಯಿ ಸುದರ್ಶನ್ 61 ಎಸೆತಗಳಲ್ಲಿ 12 ಬೌಂಡರಿ ಮತ್ತು 4 ಸಿಕ್ಸರ್ ಸಹಾಯದಿಂದ ಅಜೇಯವಾಗಿ 108 ರನ್ ಬಾರಿಸಿದರೇ, ಶುಭ್ಮನ್ ಗಿಲ್ 53 ಎಸೆತಗಳಲ್ಲಿ ಅಜೇವಾಗಿ 3 ಬೌಂಡರಿ ಮತ್ತ 7 ಸಿಕ್ಸರ್ ಸಹಾಯದಿಂದ 93 ರನ್ ಬಾರಿಸಿದರು.
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ್ದ ಡೆಲ್ಲಿ ಪರ ಕೆಎಲ್ ರಾಹುಲ್ ಕೂಡ ಶತಕ ಬಾರಿಸಿದರು. 5 ಎಸೆತಗಳನ್ನು ಎದುರಿಸಿದ ರಾಹುಲ್ 14 ಬೌಂಡರಿ ಮತ್ತು 4 ಸಿಕ್ಸರ್ ನೆರವಿನಿಂದ ಅಜೇಯವಾಗಿ 112 ರನ್ ಬಾರಿಸಿದರು. ಉಳಿದಂತೆ ಅಭಿಷೇಕ್ ಪೋರೆಲ್ (30), ಅಕ್ಷರ್ ಪಟೇಲ್ (25), ಸ್ಟಬ್ಸ್ (21) ಬ್ಯಾಟಿಂಗ್ ಸಹಾಯದಿಂದ ಡೆಲ್ಲಿ ತಂಡ 3 ವಿಕೆಟ್ ನಷ್ಟಕ್ಕೆ 199 ರನ್ ಕಲೆಹಾಕಿತು.
ಮೂರು ತಂಡಗಳು ಫ್ಲೇಆಫ್ಗೆ ಪ್ರವೇಶ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಗೆಲ್ಲುತ್ತಿದ್ದಂತೆ 18 ಅಂಕಗಳನ್ನು ಪಡೆದು ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿತು. ಇದರೊಂದಿಗೆ ಎರಡು ತಂಡಗಳು ಪ್ಲೇಆಫ್‌ಗೆ ಬಡ್ತಿ ಪಡೆದವು. ಹೌದು, ಎರಡನೇ ಸ್ಥಾನದಲ್ಲಿರುವ ಆರ್ಸಿಬಿ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಕ್ವಾಲಿಫೈ ಆಗಿವೆ.




