ಕೋಲ್ಕತ್ತಾ: ಬಲಿಷ್ಠ ತಂಡಗಳಲ್ಲಿ ಒಂದಾದ ಪಂಜಾಬ್ ಕಿಂಗ್ಸ್ ತಂಡವು ಇಂದು ಸಾಯಂಕಾಲ ನಡೆಯುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ 44 ನೇ ಲೀಗ್ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.
ಇಲ್ಲಿನ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿರುವ ಪಂದ್ಯಕ್ಕೆ ಉಭಯ ತಂಡಗಳು ಸಜ್ಜಾಗಿದ್ದು, ಪಂಜಾಬ್ ಕಿಂಗ್ಸ್ ತಂಡ ತಾನಾಡಿರುವ 8 ಪಂದ್ಯಗಳ ಪೈಕಿ 5 ರಲ್ಲಿ ಗೆದ್ದು 3 ರಲ್ಲಿ ಸೋತು 10 ಅಂಕ ಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.
ಕೋಲ್ಕತ್ತಾ ರೈಡರ್ಸ್ ಕೂಡ 8 ಪಂದ್ಯಗಳನ್ನು ಆಡಿದ್ದು, 3 ರಲ್ಲಿ ಗೆದ್ದು 5 ರಲ್ಲಿ ಸೋತು 6 ಅಂಕಗಳಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ 7 ನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೂ ಮಹತ್ವದ ಪಂದ್ಯವಾಗಿದೆ.