Ad imageAd image

ಇನ್ನು ಭಾರತ- ಪಾಕ್ ಕ್ರಿಕೆಟ್ ಬಾಗಿಲು ಸಂಪೂರ್ಣವಾಗಿ ಮುಚ್ಚುವುದೇ?

Bharath Vaibhav
ಇನ್ನು ಭಾರತ- ಪಾಕ್ ಕ್ರಿಕೆಟ್ ಬಾಗಿಲು ಸಂಪೂರ್ಣವಾಗಿ ಮುಚ್ಚುವುದೇ?
WhatsApp Group Join Now
Telegram Group Join Now

ಭಾರತ ಪಾಕಿಸ್ತಾನ ನಡುವಿನ ದ್ವಿಪಕ್ಷಿಯ ಸರಣಿ ನಿಂತು ಹೋಗಿ ಹಲವು ವರ್ಷಗಳೇ ಕಳೆದಿವೆ. ಸದ್ಯ ಈ ಎರಡು ರಾಷ್ಟ್ರಗಳ ತಂಡಗಳು ಐಸಿಸಿ ಆಯೋಜಿತ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿ ಆಗುತ್ತಿವೆ. ಭಾರತ-ಪಾಕ್​ ಪಂದ್ಯ ಅಭಿಮಾನಿಗಳಿಗೆ ಹೆಚ್ಚಿನ ರಸದೌತಣ ನೀಡುತ್ತದೆ. ಇದೇ ಕಾರಣಕ್ಕೆ ಐಸಿಸಿ ಈ ಎರಡೂ ತಂಡಗಳನ್ನು ಒಂದೇ ಗುಂಪಿನಲ್ಲಿ ಇರಿಸುತ್ತದೆ.

ಆದರೆ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನ ತಂಡಗಳು​​ ಐಸಿಸಿ ಟೂರ್ನಿಗಳಲ್ಲಿ ಒಂದೇ ಗುಂಪಿನಲ್ಲಿ ಆಡದಿರಲು ಯೋಚಿಸುತ್ತಿದೆ ಎಂಬ ವರದಿಗಳಾಗಿದ್ದು ಈ ನಿಟ್ಟಿನಲ್ಲಿ ಐಸಿಸಿಗೂ ಪತ್ರ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಭವಿಷ್ಯದಲ್ಲಿ ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ಗುಂಪಿನಲ್ಲಿ ಇರಿಸಬಾರದು (ವಿಶ್ವಕಪ್, ಚಾಂಪಿಯನ್ಸ್ ಟ್ರೋಫಿ) ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ವರದಿಯಾಗಿದೆ. ಆದರೆ ಬಿಸಿಸಿಐನಿಂದ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ.

ಕ್ರಿಕ್‌ಬಜ್ ವರದಿಯ ಪ್ರಕಾರ, ಬಿಸಿಸಿಐನ ಉನ್ನತ ಅಧಿಕಾರಿಗಳು ಈ ಬಗ್ಗೆ ಯೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. “ಭಯೋತ್ಪಾದನಾ ದಾಳಿಯ ಬಗ್ಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಪಾಕಿಸ್ತಾನದೊಂದಿಗಿನ ಕ್ರಿಕೆಟ್ ಸಂಬಂಧಗಳನ್ನು ಕಡಿತಗೊಳಿಸುವಂತೆಯೂ ಬೇಡಿಕೆಗಳು ಬರುತ್ತಿವೆ. ಬಿಸಿಸಿಐನ ಉನ್ನತ ಪದಾಧಿಕಾರಿಯೊಬ್ಬರು ಇದೇ ವಿಷಯವನ್ನು ಉಲ್ಲೇಖಿಸಿ, ಇದು ಬಹಳ ಸೂಕ್ಷ್ಮ ವಿಷಯವಾಗಿದೆ, ಆದ್ದರಿಂದ ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಭವಿಷ್ಯದಲ್ಲಿ ಏನಾಗುತ್ತದೆ ಎಂದು ನಾವು ಹೇಳಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಈ ವರ್ಷ ಚಾಂಪಿಯನ್ಸ್ ಟ್ರೋಫಿ ಈಗಾಗಲೇ ನಡೆದಿದೆ ಎಂದು ತಿಳಿದಿದೆ. ಪಾಕಿಸ್ತಾನ ಈ ಟೂರ್ನಿಗೆ ಆತಿಥ್ಯ ವಹಿಸಿಕೊಂಡಿತ್ತು. ಆದರೆ ಪಾಕ್​ಗೆ ಪ್ರಯಾಣಿಸಲು ಭಾರತ ಹಿಂದೇಟು ಹಾಕಿದ್ದಾಕ್ಕೆ ಟೀಮ್ ಇಂಡಿಯಾದ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆದವು. ಕೊನೆಯಲ್ಲಿ, ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿತು.

ಈ ವರ್ಷ ಪುರುಷರ ವಿಭಾಗದಲ್ಲಿ ಯಾವುದೇ ಐಸಿಸಿ ಟೂರ್ನಿಗಳಿಲ್ಲ. ಮುಂದಿನ ವರ್ಷ ಟಿ20 ವಿಶ್ವಕಪ್ ಇದೆ. ಬಳಿಕ ಏಷ್ಯಾ ಕಪ್ ಕೂಡ ಪಂದ್ಯಾವು ನಡೆಯಲಿದೆ ಇದು ಐಸಿಸಿ ಪಂದ್ಯಾವಳಿಯಲ್ಲದಿದ್ದರೂ ಬಿಸಿಸಿಐ ಇದನ್ನು ಆಯೋಜಿಸುತ್ತದೆ. ಬಿಸಿಸಿಐ ಮತ್ತು ಎಸಿಸಿ ಈ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ನಡೆಸಬೇಕೆಂದು ಬಯಸುತ್ತವೆ. ಮಹಿಳಾ ವಿಶ್ವಕಪ್ ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ನಡೆಯಲಿದೆ. ಇದಕ್ಕೆ ಪಾಕಿಸ್ತಾನ ಕೂಡ ಅರ್ಹತೆ ಪಡೆದಿದೆ. ಭಾರತದ ವಿರುದ್ಧದ ಪಂದ್ಯಗಳನ್ನು ತಟಸ್ಥ ಸ್ಥಳಗಳಲ್ಲಿ ನಡೆಸಲಾಗುತ್ತದೆಯೇ ಅಥವಾ ರದ್ದುಗೊಳಿಸಲಾಗುತ್ತದೆಯೇ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಬೇಕಿದೆ.

WhatsApp Group Join Now
Telegram Group Join Now
Share This Article
error: Content is protected !!