Ad imageAd image

ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ : ಈಶ್ವರ ಖಂಡ್ರೆ

Bharath Vaibhav
ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ : ಈಶ್ವರ ಖಂಡ್ರೆ
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ.

ಈ ಹುದ್ದೆಗಳ ಭರ್ತಿಗೆ ಸರ್ಕಾರ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂಬುದಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ತಾವು ಸಚಿವರಾಗಿ ಅಧಿಕಾರ ವಹಿಸಿಕೊಂಡು ವರ್ಷ ತುಂಬಿದ ಸಂದರ್ಭದಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರ ಪ್ರಶ್ನೆಗೆ ಉತ್ತರಿಸಿದ ಅವರು, ಅರಣ್ಯ ಇಲಾಖೆಯಲ್ಲಿ ಸುಮಾರು 6 ಸಾವಿರ ಹುದ್ದೆಗಳು ಖಾಲಿ ಇದ್ದು, ಇವುಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ.

ಈಗಾಗಲೇ ಅರಣ್ಯ ವೀಕ್ಷಕರ 310 ಹುದ್ದೆಗಳ ನೇಮಕಾತಿಗೆ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿ ಪೂರ್ಣವಾಗಿದ್ದು, ನೀತಿ ಸಂಹಿತೆ ತೆರವಾದ ಬಳಿಕ ನೇಮಕಾತಿ ಪತ್ರಗಳನ್ನು ವಿತರಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.
ಇದರ ಜೊತೆಗೆ 540 ಅರಣ್ಯ ರಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ.

ಜೊತೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆಯ ಪೂರ್ವಾನುಮತಿಯ ಅವಶ್ಯಕತೆ ಇಲ. ಹೀಗಾಗಿ ಈ ಭಾಗದಲ್ಲಿ ಖಾಲಿ ಇರುವ 10 ವಲಯ ಅರಣ್ಯಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಶೀಘ್ರ ಲಿಖಿತ ಪರೀಕ್ಷೆ ನಡೆಸಲು ಸೂಚಿಸಲಾಗಿದೆ ಎಂದರು.

ಉಪ ವಲಯ ಅರಣ್ಯಾಧಿಕಾರಿ ಕಂ ಮೋಜಿಣಿದಾರರ 143 ಹುದ್ದೆ, 45 ದ್ವಿತೀಯ ದರ್ಜೆ ಹಾಯಕರು ಮತ್ತು 18 ಪ್ರಥಮ ದರ್ಜೆ ಸಹಾಯಕರು ಸೇರಿದಂತೆ ವಿವಿಧ ವೃಂದದ ಖಾಲಿ ಹುದ್ದೆಗಳ ನೇಮಕಾತಿಗೂ ಕರಡು ಪ್ರಸ್ತಾವನೆ ಸಿದ್ಧಗೊಂಡಿದೆ ಎಂದು ಅರಣ್ಯ ಸಚಿವರು ವಿವರಿಸಿದರು.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!