Ad imageAd image

ಮೋದಿ ಅವರು ತೀರಿಕೊಂಡರೆ ಯಾರು ಪ್ರಧಾನಿ ಅಭ್ಯರ್ಥಿ ಇಲ್ಲವೇ? : ಕಾಗೆ ವಿವಾದಾತ್ಮಕ ಹೇಳಿಕೆ 

Bharath Vaibhav
ಮೋದಿ ಅವರು ತೀರಿಕೊಂಡರೆ ಯಾರು ಪ್ರಧಾನಿ ಅಭ್ಯರ್ಥಿ ಇಲ್ಲವೇ? : ಕಾಗೆ ವಿವಾದಾತ್ಮಕ ಹೇಳಿಕೆ 
MLA
WhatsApp Group Join Now
Telegram Group Join Now

ಬೆಳಗಾವಿ : ಭಾರತ ದೇಶದಲ್ಲಿ 140 ಕೋಟಿ ಜನಸಂಖ್ಯೆ ಇದೆ. ನರೇಂದ್ರ ಮೋದಿ ಅವರು ತೀರಿಕೊಂಡರೆ 140 ಕೋಟಿ ಜನರಲ್ಲಿ ಯಾರು ಪ್ರಧಾನಿ ಅಭ್ಯರ್ಥಿ ಇಲ್ಲವೇ? ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಮದಾಪುರದಲ್ಲಿ ನಡೆದ ಕಾಂಗ್ರೆಸ್ ಚುನಾವಣಾ ಪ್ರಚಾರದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ?ಮೋದಿ ತೀರಿಕೊಂಡರೆ ಈ ದೇಶದಲ್ಲಿ ಮುಂದೆ ಪ್ರಧಾನಿ ಆಗೋದೇ ಇಲ್ಲವಾ? ಮೊದಿ ತೀರಿಕೊಂಡರೆ 140 ಕೊಟಿ ಜನಸಂಖ್ಯೆಯಲ್ಲಿ ಪ್ರಧಾನಿ ಅಭ್ಯರ್ಥಿಯೇ ಇಲ್ವಾ? ಎಂದು ಪ್ರಶ್ನೆ ಮಾಡಿದ್ದಾರೆ.

ಈಗಿನ ಯುವಕರು ಮೋದಿ ಮೋದಿ ಅನ್ನುತ್ತಾರೆ, ಮೋದಿನ ತೆಗೆದುಕೊಂಡು ನೆಕ್ಕುತ್ತೀರಾ? ರಾಜ್ಯದಲ್ಲಿ ಮತದಾರುರು ಕಾಂಗ್ರೆಸ್ ಸರ್ಕಾರ ಬೇಕು ಅಂತಾರೆ, ಆದ್ರೆ ಕೇಂದ್ರದಲ್ಲಿ ಮೋದಿನೇ ಬರಬೇಕು ಅಂತಾರೆ. ಮೋದಿ ಇಲ್ಲಿ ಬಂದು ನೋಡುತ್ತಾರಾ? ಇಲ್ಲಿ ಏನಾದರೂ ಸಮಸ್ಯೆ ಆದರೆ ಮೋದಿ ಬರುವುದಿಲ್ಲ. ಇಲ್ಲಿ ನಾವೇ ನಿಮ್ಮ ಸಮಸ್ಯೆ ಆಲಿಸಬೇಕು ಎಂದರು.

ನರೇಂದ್ರ ಮೋದಿ ಅವರು 3,000 ಕೋಟಿ ವಿಮಾನದಲ್ಲಿ ಓಡಾಡ್ತಾರೆ, 4 ಲಕ್ಷ ರೂಪಾಯಿ ಸೂಟ್ ಹಾಕಿಕೊಳ್ತಾರೆ. ಇದೇ ವೇಳೆ ನಾನೂ ವಿದ್ಯಾವಂತ ಇದ್ದೀನಿ, ನನಗೂ ಬುದ್ಧಿ ಇದೆ, ನಾನೇನು ಕುರಿ ಅಲ್ಲ. ನಾನು ಸಹ ಈ ದೇಶವನ್ನ ಸಮರ್ಥವಾಗಿ ಮುನ್ನಡೆಸುತ್ತೇನೆ ಎನ್ನುವ ಆತ್ಮವಿಶ್ವಾಸ ಇದೆ ಎಂದು ಹೇಳಿದ್ದಾರೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!