Ad imageAd image

‘ಸಮಾನತೆಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ’

Bharath Vaibhav
‘ಸಮಾನತೆಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ’
WhatsApp Group Join Now
Telegram Group Join Now

ಶ್ರೀ ಬಸವೇಶ್ವರ ದೇವಾಲಯ ಪ್ರಥಮ ವಾರ್ಷಿಕೋತ್ಸವ, ಕಾರ್ಯಕ್ರಮದಲ್ಲಿ ಸತೀಶ ಗುಡಗನಟ್ಟಿ ಭಾಷಣ

ನಿಂಗ್ಯಾನಟ್ಟಿ: ನಿಂಗ್ಯಾನಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವಾಲಯದ ಪ್ರಥಮ ವಾರ್ಷಿಕೋತ್ಸವ ಹಾಗೂ ಜಾನಪದ ಜಾತ್ರೆಯ ಸಂದರ್ಭದಲ್ಲಿ ನಿನ್ನೆ ರಾತ್ರಿ 9 ಗಂಟೆಗೆ ನಡೆದ ಭವ್ಯ ಸಮಾರಂಭದಲ್ಲಿ ಬೆಳಗಾವಿ ವರದಿ ಹಾಗೂ ಸಾಕ್ಷಿ ಪ್ರಭಾ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕರು ಸತೀಶ್ ಬಿ. ಗುಡಗೇನಟ್ಟಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಭಕ್ತರನ್ನು ಉದ್ದೇಶಿಸಿ ಪ್ರೇರಣಾದಾಯಕ ಭಾಷಣ ಮಾಡಿದರು.

ಗುಡಗೇನಟ್ಟಿ ಅವರು ತಮ್ಮ ಭಾಷಣದಲ್ಲಿ, “ಬಸವಣ್ಣನವರ ಸತ್ಯ, ಶ್ರದ್ಧೆ ಹಾಗೂ ಸಮಾನತೆಯ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಪ್ರತಿಯೊಬ್ಬರ ಜವಾಬ್ದಾರಿ. ಈ ದೇವಾಲಯದ ನಿರ್ಮಾಣದಲ್ಲಿ ಗ್ರಾಮಸ್ಥರು, ಯುವಕರು ಹಾಗೂ ಭಕ್ತ ಜನರು ತೋರಿದ ಸಹಕಾರ ಗ್ರಾಮೀಣ ಏಕತೆ ಮತ್ತು ಧಾರ್ಮಿಕ ಸೌಹಾರ್ದತೆಯ ನಿಜವಾದ ಉದಾಹರಣೆಯಾಗಿದೆ” ಎಂದು ಹೇಳಿದರು.

ಅವರು ಮುಂದುವರೆದು, “ಈ ಜಾನಪದ ಜಾತ್ರೆ ನಮ್ಮ ಸಂಸ್ಕೃತಿಯ ಜೀವಂತ ಚಿಹ್ನೆಯಾಗಿದೆ. ಜನಪದ ಕಲೆಗಳು ಕೇವಲ ಮನರಂಜನೆಗಾಗಿ ಅಲ್ಲ, ಅದು ಸಂಸ್ಕೃತಿ ಸಂರಕ್ಷಣೆಯ ಪವಿತ್ರ ಪ್ರಯತ್ನವಾಗಿದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನ್ಯೂ ಗಂಧರ್ವ ಮೆಲೋಡಿಸ್ ಆರ್ಕೆಸ್ಟ್ರಾ, ಹಾವೇರಿ ತಂಡವು ಮನೋಜ್ಞ ಕಲಾ ಪ್ರದರ್ಶನ ನೀಡಿ ಜನರ ಮೆಚ್ಚುಗೆ ಗಳಿಸಿತು. ಸಮಾರಂಭ ಯಶಸ್ವಿಯಾಗಿ ನಡೆಯಲು ಶ್ರಮಿಸಿದ ದೇವಸ್ಥಾನ ಸಮಿತಿ, ಭಕ್ತರು ಹಾಗೂ ಗ್ರಾಮಸ್ಥರಿಗೆ ಅವರು ಅಭಿನಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಭಕ್ತರು, ಗ್ರಾಮಸ್ಥರು ಹಾಗೂ ಅತಿಥಿಗಳು ಭಾರಿ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!