ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಪಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಇನ್ಮುಂದೆ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ಇಂದಿನ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ಈ ಸಂಬಂಧ ಸಿಎಸ್ ಶಾಲಿನಿ ರಜನೀಶ್ ಹಾಗೂ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಸೇರಿದಂತೆ ಇತರೆ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಯಿತು.ಈ ಸಭೆಯಲ್ಲಿ ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ.
ಸರ್ಕಾರಿ ಸ್ವಾಮ್ಯದ ಖಾದಿ ಗ್ರಾಮೋದ್ಯೋಗ ಮಳಿಗೆಯಲ್ಲಿ ಖಾದಿ ಬಟ್ಟೆ ಖರೀದಿಸಿ. ಖಾದಿ ಗ್ರಾಮೋದ್ಯೋಗ ಮಂಡಳಿ ರಿಯಾಯಿತಿ ನೀಡಬೇಕು. ಈಗ ನೀಡುತ್ತಿರುವ ರಿಯಾಯಿತಿಗಿಂತ ಶೇ.5 ಹೆಚ್ಚುವರಿ ನೀಡಬೇಕು. ಪುರುಷ ನೌಕರರು ಖಾದಿ ಬಟ್ಟೆಯ ಪ್ಯಾಂಟ್, ಶರ್ಟ್, ಓವರ್ ಕೋಟ್ ಹಾಕಬೇಕು. ಮಹಿಳೆಯರು ರೇಷ್ಮೆ ಸೀರೆ, ಚೂಡಿದಾರ ಧರಿಸುವಂತೆ ಸೂಚಿಸಲಾಗಿದೆ.
ಏಪ್ರಿಲ್.24ರಂದು ಈ ಯೋಜನೆಗೆ ಸರ್ಕಾರ ಚಾಲನೆ ನೀಡಲಿದೆ. ಆ ಬಳಿಕ ಪ್ರತಿ ತಿಂಗಳ ಮೊದಲ ಶನಿವಾರದಂದು ರಾಜ್ಯ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವಂತ ನಿಯಮವು ಕಡ್ಡಾಯವಾಗಲಿದೆ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ.




