Ad imageAd image

ಜ.4 ವಿಶ್ವ ಕರ್ಮ ಜನಜಾಗೃತಿ ಸಮಾವೇಶ ಮತ್ತು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಕಾರ್ಯಕ್ರಮ ಕುರಿತು ಮಾಧ್ಯಮಗೋಷ್ಟಿ

Bharath Vaibhav
ಜ.4 ವಿಶ್ವ ಕರ್ಮ ಜನಜಾಗೃತಿ ಸಮಾವೇಶ ಮತ್ತು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಕಾರ್ಯಕ್ರಮ  ಕುರಿತು ಮಾಧ್ಯಮಗೋಷ್ಟಿ
WhatsApp Group Join Now
Telegram Group Join Now

ಬೆಂಗಳೂರು : ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ಕ್ರಾಸ್ ಶ್ರೀ ನೀಲಕಂಟೇಶ್ವರ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಜನೆವರಿ 4ರಂದು ವಿಶ್ವಕರ್ಮ ಜನಜಾಗೃತಿ ಸಮಾವೇಶ ಮತ್ತು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಕಾರ್ಯಕ್ರಮ ಕುರಿತು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು.

ಸಮಾಜದ ಮುಖಂಡರಾದ ಕೆ.ಎನ್.ಶ್ರೀಧರ್, ಬೆಂಗಳೂರುನಗರ ಜಿಲ್ಲಾಧ್ಯಕ್ಷ ಸಿ.ಎನ್.ಗಂಗಾಧರ್ ಚಾರ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹೆಚ್.ಜಿ.ಜಗದೀಶ್, ಸುಂಕದಕಟ್ಟೆ ಅಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಎಂ.ಕೆ.,ಉಪಾಧ್ಯಕ್ಷ ನಾಗರಾಜು ಎಸ್.ಯುವ ಮುಖಂಡ ಅಶೋಕ್ ಕಾಳಚಾರಿ, ಭಾಗವಹಿಸಿದ್ದರು.

ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಮಾಜಿ ವಿಧಾನ ಪರಿಷತ್ ಸದಸ್ಯ ಅಧ್ಯಕ್ಷ ಕೆ.ಪಿ.ನಂಜುಂಡಿ ಅವರ ನೇತೃತ್ವದಲ್ಲಿ ಮಹಾಸಭಾ ಬಲಿಷ್ಠ ಸಂಘಟನೆಯಾಗಿದೆ.

ವಿಶ್ವಕರ್ಮ ಸಮುದಾಯ ರಾಜ್ಯದಲ್ಲಿ 45ಲಕ್ಷ ಜನರು ಇದ್ದು. ಚಾಮರಾಜನಗರದಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಇದೆ.

ಕೆ.ಪಿ.ನಂಜುಂಡಿ ಹೋರಾಟದ ಫಲದಿಂದ ವಿಶ್ವಕರ್ಮ ಅಭಿವೃದ್ಧಿ ನಿಗಮ , ಅಮರಶಿಲ್ಪಿ ಜಕಣಾಚಾರಿ ಜನ್ಮದಿನಾಚರಣೆ ಸರ್ಕಾರ ಅಚರಣೆ ಮಾಡುತ್ತಿದೆ.

ವಿಶ್ವಕರ್ಮ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ವರದಿ ಸಮರ್ಪಕವಾಗಿಲ್ಲ, ಹೊಸದಾಗಿ ಕುಲಶಾಸ್ತ್ರೀಯ ಅಧ್ಯಯನವಾಗಬೇಕು.

ವಿಶ್ವಕರ್ಮ ಸಮುದಾಯಕ್ಕೆ ಎಸ್.ಟಿ.ಮೀಸಲಾತಿ ಸಿಗಬೇಕು ಎಂಬ ಸಂಘಟಿತರಾಗಿ ಹೋರಾಟ ಮಾಡಲಾಗುವುದು.

ಜನವರಿ 4ರಂದು ಬೃಹತ್ ಜನಜಾಗೃತಿ ಅಭಿಯಾನ ಮತ್ತು ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣೆ ದಿನಾಚರಣೆಯನ್ನು ದಾಸರಹಳ್ಳಿ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಮುನಿರಾಜು , ಮಾಜಿ ಸಚಿವ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅಧ್ಯಕ್ಷತೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಮಾಜಿ ವಿಧಾನಪರಿಷತ್ ಸದಸ್ಯ ಕೆ.ಪಿ.ನಂಜುಂಡಿ ವಹಿಸಲಿದ್ದಾರೆ. ವಿಶ್ವಕರ್ಮ ಸಮಾಜ ಮುಖಂಡರು ಮಹಿಳೆಯರು ಭಾಗವಹಿಸಲಿದ್ದಾರೆ ಎಂದು ಮಾಧ್ಯಮಗೋಷ್ಟಿಯಲ್ಲಿ ತಿಳಿಸಿದರು.

ವರದಿ : ಅಯ್ಯಣ್ಣ ಮಾಸ್ಟರ್ 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!