Ad imageAd image

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿವಾಸದಲ್ಲಿ ಭೋಜನ ಸ್ವೀಕರಿಸಿದ ಜಗದೀಶ ಶೆಟ್ಟರ್ ಅವರು ನಂತರ ಶಾಸಕದ್ವಯರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ

Bharath Vaibhav
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿವಾಸದಲ್ಲಿ ಭೋಜನ ಸ್ವೀಕರಿಸಿದ ಜಗದೀಶ ಶೆಟ್ಟರ್ ಅವರು ನಂತರ ಶಾಸಕದ್ವಯರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ
WhatsApp Group Join Now
Telegram Group Join Now

ಗೋಕಾಕ್ : ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿವಾಸದಲ್ಲಿ ಭೋಜನ ಸ್ವೀಕರಿಸಿದ ಜಗದೀಶ ಶೆಟ್ಟರ್ ಅವರು ನಂತರ ಶಾಸಕದ್ವಯರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರ ಜೊತೆ ಸುಮಾರು 20 ನಿಮಿಷಗಳ ಕಾಲ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು.

ಲೋಕಸಭಾ ಚುನಾವಣೆಯಲ್ಲಿ ಶೆಟ್ಟರ್ ಗೆಲುವಿಗೆ ಅನುಸರಿಸಬೇಕಾದ ಕಾರ್ಯತಂತ್ರಗಳನ್ನು ರೂಪಿಸಿದರೆಂದು ತಿಳಿದು ಬಂದಿದೆ. ಅರಭಾವಿ ಮತ್ತು ಗೋಕಾಕ ಮತಕ್ಷೇತ್ರದಲ್ಲಿ ಜಗದೀಶ ಶೆಟ್ಟರ್ ಅವರಿಗೆ ಹೆಚ್ಚಿನ ಮತಗಳ ಲೀಡ್ ನೀಡುತ್ತೇವೆ.

ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಶೆಟ್ಟರ್ ಅವರನ್ನು ಸಂಸತ್ತಿಗೆ ಕಳುಹಿಸುವುದು ತಮ್ಮ ಗುರಿಯಾಗಿದೆ ಜೊತೆಗೆ ಉಭಯ ಕ್ಷೇತ್ರಗಳ ಕಾರ್ಯಕರ್ತರ ಸಭೆಯನ್ನು ಎ-7ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡುತ್ತಿದ್ದು, ಎಲ್ಲ ಕಡೆಗಳಲ್ಲೂ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಪ್ರಾಥಮಿಕ ಹಂತವಾಗಿ ಮಠ-ಮಾನ್ಯಗಳು, ಜಿಲ್ಲೆಯ ಪ್ರಮುಖ ಮುಖಂಡರನ್ನು ಸಮಕ್ಷಮ ಭೇಟಿ ಮಾಡಿ ಬೆಂಬಲ ಕೋರುತ್ತಿರುವದಾಗಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.

ರವಿವಾರದಂದು ಶಾಸಕರಾದ ರಮೇಶ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ-7ರಂದು ನಡೆಯುವ ಚುನಾವಣೆಯಲ್ಲಿ ಭಾರಿ ಅಂತರದಿಂದ ಗೆಲ್ಲುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!