ಚಿಟಗುಪ್ಪ :ತಾಲೂಕಿನ ನಿರ್ಣಾ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಜಗನಾಥರೆಡ್ಡಿ ರಾಜರೆಡ್ಡಿ ಎಖೆಳಿ ಹಾಗೂ ಉಪಾಧ್ಯಕ್ಷರಾಗಿ ಮಲ್ಲಪ್ಪ ರೇವಣಪ್ಪ ಕೋರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಶುಕ್ರವಾರ ಜರುಗಿದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಒಂದೊಂದೇ ನಾಮಪತ್ರ ಸಲ್ಲಿಸಿದರಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಬಸವರಾಜಯ್ಯ ಸಾಲಿಮಠ ತಿಳಿಸಿದರು.
ಬಳಿಕ ಅಧ್ಯಕ್ಷ ಉಪಾಧ್ಯಕ್ಷರಿಗೆ ಸನ್ಮಾನಿಸಿ ಅವರ ಬೆಂಬಲಿಗರಿಂದ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಗಿತ್ತು.

ನೂತನ ಅಧ್ಯಕ್ಷ ಜಗನಾಥರೆಡ್ಡಿ ಮಾತನಾಡಿ,ಸೇವೆ ಮಾಡಲು ಅವಕಾಶ ಕಲ್ಪಿಸಿಕೊಟ್ಟ ರೈತರಿಗೆ ಧನ್ಯವಾದಗಳು ಸಲ್ಲಿಸುತ್ತನೆ.ರೈತರ ಏಳಿಗೆಗಾಗಿ ಏನು ಮಾಡಬೇಕು ಎಂಬುದನ್ನು ಯೋಜನೆ ಹಾಕಿಕೊಂಡು ಕಾರ್ಯರೂಪಕ್ಕೆ ತರಲಾಗುತ್ತದೆ.ಅಲ್ಲದೆ ರೈತರ ಮತ್ತು ವ್ಯಾಪಾರಸ್ಥರ ಉತ್ತೇಜನಕ್ಕೆ ಸಂಪೂರ್ಣ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.
ವರದಿ:ಸಜೀಶ ಲಂಬುನೋರ




