ಬೆಂಗಳೂರು : ಹಾಸನ ಜಿಲ್ಲೆ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ.
ಅಲ್ಲದೆ ಎರಡು ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಹೈ ಕೋರ್ಟ್ ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕ ಸದಸ್ಯ ಪೀಠ ಆದೇಶ ಹೊರಡಿಸಿದೆ.
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದಂತ ಆರೋಪದಲ್ಲಿ ಹೈಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನಡೆಸಿ, ತೀರ್ಪು ಕಾಯ್ದಿರಿಸಿದ್ದರು.ಇಂದು ಹಾಸನ ಜಿಲ್ಲೆಯ ಹೊಳೆನರಸೀಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮನೆ ಕೆಲಸದಾಕೆ ನೀಡಿರುವ ದೂರಿನ ಅನ್ವಯ ದಾಖಲಾಗಿದ್ದಂತ ಅತ್ಯಾಚಾರ ಕೇಸ್, ಸೇರಿದಂತೆ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು.
ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ ಸೇರಿದ ಗನ್ನಿಗಡ ತೋಟದ ಮನೆಯಲ್ಲಿನ ಕೆಲಸದಾಕೆಯ ದೂರಿನ ಅನ್ವಯ ದಾಖಲಾಗಿರುವ ಅತ್ಯಾಚಾರ ಪ್ರಕರಣ ಮತ್ತು ಪುತ್ರನಿಗೆ ಪ್ರತಿಷ್ಠಿತ ಶಾಲೆಯಲ್ಲಿ ಪ್ರವೇಶ ಕಲ್ಪಿಸುವ ನೆಪದಲ್ಲಿ ಹಾಸನದ ಮಹಿಳೆಯ ನಗ್ನ ಚಿತ್ರ/ವಿಡಿಯೊ ಸೆರೆ ಹಿಡಿದ ಆರೋಪಕ್ಕೆ ಸಂಬಂಧಿಸಿದ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದ ಪ್ರಜ್ವಲ್ ಅರ್ಜಿಗಳನ್ನು ಹೈಕೋರ್ಟ್ ತಿರಸ್ಕರಿಸಿದೆ. ಈ ಎರಡೂ ಪ್ರಕರಣಗಳು ಬೆಂಗಳೂರಿನ ಸಿಐಡಿ ಸೈಬರ್ ಠಾಣೆಯಲ್ಲಿ ದಾಖಲಾಗಿವೆ.