ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಲಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರ ಬೆನ್ನಲ್ಲೇ ದರ್ಶನ್ ಜಾಮೀನು ಕೋರಿ ಸೆಪ್ಟೆಂಬರ್ 21ರಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ .
ಇಂದು ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಹೆಚ್ ಕೋರ್ಟ್ ನಲ್ಲಿ ನ್ಯಾಯಮೂರ್ತಿ ಜೈ.ಶಂಕರ್ ಅವರು ವಿಚಾರಣೆ ನಡೆಸಲಿದ್ದಾರೆ.
ಬೆಂಗಳೂರಿನ ಸೇಷನ್ಸ್ ಕೋರ್ಟ್ ನಲ್ಲಿ ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ವೇಳೆ, ಎಸ್ ಪಿ ಪಿ ಪ್ರಸನ್ನಕುಮಾರ ಅವರು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಿದ್ದರು.
ಈ ವೇಳೆ ವಾದ ಮಂಡನೆಗೆ ಕಾಲಾವಕಾಶ ಕೋರಿ ದರ್ಶನ್ ಪರ ವಕೀಲರಾದ ಸುನಿಲ್ ಮನವಿ ಮಾಡಿದರು. ಹಾಗಾಗಿ ಇವರ ಒಂದು ಮನವಿಯ ಮೇರೆಗೆ ಸೆಪ್ಟೆಂಬರ್ 30 ಕ್ಕೆ ವಿಚಾರಣೆ ಮುಂದೂಡಿ ಕೋರ್ಟ್ ಆದೇಶಿಸಿತ್ತು.