ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ಸಮೀರವಾಡಿಯಲ್ಲಿ ಕಬ್ಬಿನ ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿದ ಆಘಾತಕಾರಿ ಘಟನೆಯು ರೈತ ಸಮುದಾಯದಲ್ಲಿ ಆತಂಕ ಮತ್ತು ಆಕ್ರೋಶವನ್ನು ಹುಟ್ಟಿಸಿದೆ.
ಕಳೆದ 15 ದಿನಗಳಿಂದ ಕಬ್ಬಿನ ಬಾಕಿ ಪಾವತಿ ಮತ್ತು ನ್ಯಾಯಯುತ ಬೆಲೆಗಾಗಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ವಿರುದ್ಧ ಈ ಕೃತ್ಯ ನಡೆದಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ರೈತ ಸಂಘಗಳು ತೀವ್ರ ಖಂಡನೆ ವ್ಯಕ್ತಪಡಿಸಿವೆ.
ಕರ್ನಾಟಕ ರಾಜ್ಯ ರೈತ ಸಂಘದ ಬಡಗಲಪುರ ನಾಗೇಂದ್ರ ನೇತೃತ್ವದ ತಂಡವು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ಟ್ರ್ಯಾಕ್ಟರ್‌ಗಳಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಕೃತ್ಯವು ಸಂಪೂರ್ಣ ಖಂಡನೀಯ. ಇದು ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದೆ.




